ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರದಲ್ಲಿ ಪ್ರವಾಹ: ಅಪಾಯದಲ್ಲಿದ್ದ 700 ಜನರ ರಕ್ಷಣೆ

Last Updated 26 ಮೇ 2019, 6:19 IST
ಅಕ್ಷರ ಗಾತ್ರ

ಅಗರ್ತಲಾ: ಈಶಾನ್ಯ ರಾಜ್ಯ ತ್ರಿಪುರದಲ್ಲಿ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಉತ್ತರ ತ್ರಿಪುರ, ಉನೈಕೋಟಿ, ದಲೈ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಪಾಯದಲ್ಲಿದ್ದ 700 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ತ್ರಿಪುರ ಸರ್ಕಾರ ತಿಳಿಸಿದೆ.

ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಮುಳುಗಡೆ ಪ್ರದೇಶಗಳಲ್ಲಿರುವ ಜನರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತೋಡಗಿದ್ದಾರೆ. 10 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಿದ್ದಾರೆ. 500ಕ್ಕೂ ಹೆಚ್ಚು ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದ್ದು ಆಹಾರ, ಬಟ್ಟೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 24 ಗಂಟೆಯಲ್ಲಿ ಮಳೆ ಮುಂದುವರೆಯುವುದರಿಂದ ಪ್ರವಾಹದ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ದೊರೆ‌ತಿದ್ದು ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸಲಾಗುವುದು ಎಂದು ತ್ರಿಪುರ ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT