ಭಾನುವಾರ, ಸೆಪ್ಟೆಂಬರ್ 26, 2021
21 °C

ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಹಗರಣದ ಆರೋಪಿ ಸೋಶೇನ್‌ ವಿಚಾರಣಾವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅತಿಗಣ್ಯ ವ್ಯಕ್ತಿಗಳು ಬಳಸುವ ಹೆಲಿಕಾಪ್ಟರ್‌ ಖರೀದಿ ಹಗರಣದ ಪ್ರಮುಖ ಆರೋಪಿ ರಕ್ಷಣಾ ಇಲಾಖೆಯ ಏಜೆಂಟ್‌ ಸೋಶೇನ್‌ ಮೋಹನ್‌ ಗುಪ್ತಾ ಅವರ ಕಸ್ಟಡಿ ವಿಚಾರಣಾ ಅವಧಿಯನ್ನು ದೆಹಲಿ ನ್ಯಾಯಾಲಯ ಮೂರು ದಿನಗಳ ಅವಧಿಗೆ ವಿಸ್ತರಿಸಿದೆ.

ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಸಂಬಂಧಿಸಿದಂತೆ ₹ 3,600 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.

ಸೋಶೇನ್‌ರನ್ನು ಇನ್ನೂ ಮೂರು ದಿನಗಳ ಕಾಲ ವಿಚಾರಣೆ ನಡೆಸಲು ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರು ಅನುಮತಿ ನೀಡಿದರು. ಸೋಶೇನ್‌ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ ಅವರ ಸೋದರಳಿಯ ರತುಲ್‌ ಪುರಿ ಅವರೊಂದಿಗೆ ವಿಚಾರಣೆ ಎದುರಿಸಬೇಕಾಗುತ್ತದೆ. ರತುಲ್‌ ಅವರನ್ನೂ ವಿಚಾರಣೆಗಾಗಿ ಕರೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು