ಸೋಮವಾರ, ಜೂಲೈ 6, 2020
26 °C

ವಿದ್ಯಾರ್ಥಿಗಳಿಗೆ ಸಹಾಯವಾಣಿ: ಯುಜಿಸಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ರಕ್ಷಣೆಗೆ ನೆರವಾಗಲು ಸಹಾಯವಾಣಿ ಆರಂಭಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಈ ಕುರಿತು ಎಲ್ಲ ಕುಲಪತಿಗಳಿಗೆ ಬರೆದಿರುವ ಪತ್ರದಲ್ಲಿ ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು, ಲಾಕ್‌ಡೌನ್‌ ಅವಧಿಯಲ್ಲಿ ವಿದ್ಯಾರ್ಥಿಗಳು ಒತ್ತಡ ಅಥವಾ ಆತಂಕಕ್ಕೆ ಒಳಗಾದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಮಾನಸಿಕ ಆರೋಗ್ಯ ರಕ್ಷಣೆಗೆ ನೆರವಾಗಲು ಸ್ಥಾಪಿಸುವ ಸಹಾಯವಾಣಿಯನ್ನು ವಿವಿಧ ವಿಭಾಗಗಳ ನಿಗದಿಪಡಿಸಿದ ಸದಸ್ಯರು ನಡೆಸಿಕೊಡಬೇಕು ಎಂದು ಸಲಹೆ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಈಗಾಗಲೇ ಉಚಿತ ಕರೆ ಸೌಲಭ್ಯವಿರುವ ಸಹಾಯವಾಣಿಯನ್ನು (080-46110007) ಸಾರ್ವಜನಿಕರಿಗಾಗಿ ಆರಂಭಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು