ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಹೇಮಂತ್‌ ಸೊರೇನ್‌ ಪ್ರಮಾಣವಚನ

Last Updated 29 ಡಿಸೆಂಬರ್ 2019, 11:56 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್‌ರಾಜ್ಯದ ಮುಖ್ಯಮಂತ್ರಿಯಾಗಿ ಹೇಮಂತ್‌ ಸೊರೇನ್‌ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.

ಜಾರ್ಖಂಡ್‌ ರಾಜಧಾನಿ ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ನಾಯಕರು ಸೇರಿದಂತೆ ಹಲವು ಪಕ್ಷಗಳ ಮುಖ್ಯಸ್ಥರು ಭಾಗಿಯಾಗಿದ್ದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಡಿಎಂಕೆ ಮುಖಂಡಎಂ.ಕೆ ಸ್ಟಾಲಿನ್‌ ಸೇರಿದಂತೆ ಹಲವು ನಾಯಕರು ಸೊರೇನ್‌ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ಜೆಎಂಎಂನ ಮಿತ್ರ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಆರ್‌ಜೆಡಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT