ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಗಲಿದೆ ಸೊರೇನ್‌ ಪದಗ್ರಹಣ

Last Updated 29 ಡಿಸೆಂಬರ್ 2019, 7:57 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್‌ನ 11ನೇ ಮುಖ್ಯಮಂತ್ರಿಯಾಗಿ ಜೆಎಂಎಂನ (ಜಾರ್ಖಂಡ್‌ ಮುಕ್ತಿ ಮೋರ್ಚ) ಹೇಮಂತ್‌ ಸೊರೇನ್‌ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಇಂದು ಮೊರಾಬಾದಿ ಮೈದಾನದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಸೊರೇನ್‌ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ಸ್ವೀಕರಿಸಲಿದ್ದು, ದೇಶದ ಹಲವು ನಾಯಕರು ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಸಮಾರಂಭವು ಬಿಜೆಪಿ ವಿರೋಧಿ ಪಕ್ಷಗಳ ಬಲ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಈ ಸಮಾರಂಭಕ್ಕೆ ‘ಸಂಕಲ್ಪ ದಿವಸ್‌’ ಎಂದು ಹೆಸರಿಡಲಾಗಿದೆ.

ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಾವ್‌ ಮುಖರ್ಜಿ, ಪಿ ಚಿದಂಬರಂ, ಎನ್‌ಸಿಪಿ ನಾಯಕ ಶರದ್‌ ಪವಾರ್‌, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ ನಾಥ್‌, ಚತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಸ್‌ ಬಗೇಲ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸಮಾರಂಭದಲ್ಲಿ ಭಾಗವಹಿಸುವರು.

ಇತ್ತೀಚೆಗಷ್ಟೇ ಪ್ರಕಟವಾದ ಜಾರ್ಖಂಡ್‌ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಮೈತ್ರಿ ಸ್ಪಷ್ಟ ಬಹುಮತ ಪಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT