ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್ ಹಂತಕಿ ನಳಿನಿಗೆ ವಾದ ಮಂಡಿಸಲು ಒಪ್ಪಿಗೆ

Last Updated 25 ಜೂನ್ 2019, 20:15 IST
ಅಕ್ಷರ ಗಾತ್ರ

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ.

ತನ್ನ ಮಗಳ ವಿವಾಹಕ್ಕಾಗಿ ಆರು ತಿಂಗಳ ಅವಧಿಗೆ ಸಾಮಾನ್ಯ ರಜೆ ಕೋರಿ ನಳಿನಿ ಅರ್ಜಿ ಸಲ್ಲಿಸಿದ್ದರು. ಜುಲೈ 5ರಂದು ನಡೆಯುವ ಈ ಅರ್ಜಿ ವಿಚಾರಣೆಯಲ್ಲಿ ಸ್ವತಃ ವಾದ ಮಂಡಿಸುವುದಾಗಿ ನಳಿನಿ ಮನವಿ ಮಾಡಿದ್ದರು. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಎಂ.ನಿರ್ಮಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ, ಇದಕ್ಕೆ ಒಪ್ಪಿಗೆ ನೀಡಿದೆ.

ಜುಲೈ 5ರ ಮಧ್ಯಾಹ್ನ 2.15ರ ಒಳಗೆ ನಳಿನಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ವೆಲ್ಲೂರಿನ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ವಿಭಾಗೀಯ ಪೀಠ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT