ಶನಿವಾರ, ಜುಲೈ 24, 2021
23 °C

ದೆಹಲಿ: ಕೋವಿಡ್‌–19 ಚಿಕಿತ್ಸಾ ದರ ಶೇ 50 ಕಡಿತಕ್ಕೆ ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿಯಲ್ಲಿ ಕೋವಿಡ್‌–19 ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಧಾ ಸತ್ಸಂಗ್‌ ಬೀಸ್‌ ಮೈದಾನದಲ್ಲಿ 10 ಸಾವಿರ ಬೆಡ್‌ಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ನಿರ್ಮಿಸಲಾಗಿದೆ –ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌–19 ಚಿಕಿತ್ಸಾ ದರವನ್ನು ಶೇ 50ಕ್ಕಿಂತ ಹೆಚ್ಚು ಕಡಿತಗೊಳಿಸಬೇಕು ಎಂದು ಉನ್ನತ ಮಟ್ಟದ ಸಮಿತಿಯೊಂದು ಶಿಫಾರಸು ಮಾಡಿದೆ. 

ಪ್ರಸ್ತುತ ಐಸೊಲೇಷನ್‌ ಬೆಡ್‌ಗೆ ₹24–25 ಸಾವಿರ, ಐಸಿಯು ಬೆಡ್‌ಗೆ ₹34–43 ಸಾವಿರ ಹಾಗೂ ವೆಂಟಿಲೇಟರ್‌ ಸಹಿತ ಐಸಿಯು ಬೆಡ್‌ಗೆ ₹44–53 ಸಾವಿರ ದರವನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಪಿಪಿಇ ಕಿಟ್‌ ದರ ಸೇರಿಲ್ಲ. ಈ ದರದ ಬದಲಾಗಿ ಪಿಪಿಇ ಕಿಟ್‌ ದರ ಸಹಿತ ಐಸೊಲೇಷನ್‌ ಬೆಡ್‌ಗೆ ₹8–10 ಸಾವಿರ, ಐಸಿಯು ಬೆಡ್‌ಗೆ ₹13–15 ಸಾವಿರ ಹಾಗೂ ವೆಂಟಿಲೇಟರ್‌ ಸಹಿತ ಐಸಿಯು ಬೆಡ್‌ಗೆ ₹15–18 ಸಾವಿರ ದರ ನಿಗದಿಗೊಳಿಸಬೇಕು ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್‌ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ. 

ಕಳೆದ ಭಾನುವಾರ ದೆಹಲಿ ಮುಖ್ಯಮಂತ್ರಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ಗಳ ಜೊತೆ ಸಭೆ ನಡೆಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಈ ತಂಡವನ್ನು ರಚಿಸಿದ್ದರು. ಸಮಿತಿಯ ಶಿಫಾರಸಿನ ಮೇರೆಗೆ ಎರಡು ದಿನಗಳ ಹಿಂದಷ್ಟೇ ಕೋವಿಡ್‌–19 ಪರೀಕ್ಷಾ ದರವನ್ನು ₹2,400 ನಿಗದಿಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿತ್ತು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು