ಮಂಗಳವಾರ, ಏಪ್ರಿಲ್ 7, 2020
19 °C

ಕೇರಳ: ಕೋವಿಡ್‌-19 ಚಿಕಿತ್ಸೆಗೆ ಎಚ್ಐವಿ ತಡೆ ಔಷಧಿ ಪರಿಣಾಮಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

coronavirus

ತಿರುವನಂತಪುರ: ಕೋವಿಡ್–19 ಪೀಡಿತರಾಗಿದ್ದ ವ್ಯಕ್ತಿಯೊಬ್ಬರಿಗೆ ಎಚ್‌ಐವಿ ನಿರೋಧಕ ಔಷಧಿ ನೀಡಲಾಗಿದ್ದು, ಅವರು ಗುಣಮುಖರಾಗಿದ್ದಾರೆ. 

ಬ್ರಿಟಿಷ್‌ ಪ್ರಜೆಯಾಗಿರುವ ಇವರು, ಕೇರಳದ ಮುನ್ನಾರ್‌ಗೆ ಪ್ರವಾಸಕ್ಕೆಂದು ಬಂದಿದ್ದರು. ಇವರ ಜೊತೆಗೆ 17 ಪ್ರವಾಸಿಗರಿದ್ದರು. ಅದರಲ್ಲಿ ಆರು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ‘ಕೋವಿಡ್‌ ಪೀಡಿತರಾಗಿದ್ದ ವ್ಯಕ್ತಿಗೆ 60 ವರ್ಷ ವಯಸ್ಸಾಗಿದ್ದು, ಎಚ್‌ಐವಿ ಸೋಂಕಿತರಿಗೆ ನೀಡುವ ಔಷಧಿಯನ್ನು ನೀಡಲಾಗಿತ್ತು. ಅವರು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಮೂರನೇ ದಿನಕ್ಕೆ ಕೊರೊನಾ ಸೋಂಕು ಪರೀಕ್ಷಾ ವರದಿ ನೆಗೆಟಿವ್ ಬಂದಿದೆ’ ಎಂದು ಕೊಚ್ಚಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. 

ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ, ಕೋವಿಡ್‌ ಪೀಡಿತ ಬ್ರಿಟಿಷ್‌ ಪ್ರಜೆಗೆ ನೀಡಿರುವ ಎಚ್‌ಐವಿ ಔಷಧಿಗಳ ಸಂಯೋಜನೆಯನ್ನು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಶ್ವಾಸಕೋಶದ ಸೋಂಕಿನಂತಹ ತೀವ್ರವಾದ ಉಸಿರಾಟದ ಸಮಸ್ಯೆಗಳನ್ನು ಹೊಂದಿರುವವರಿಗೆ ಮಾತ್ರ ಬಳಸಬಹುದಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು