ಶನಿವಾರ, ಸೆಪ್ಟೆಂಬರ್ 18, 2021
27 °C

ಮತ ಹಾಕಿದರೆ ಕೊಲ್ಲುತ್ತೇವೆ: ಹಿಜ್ಬುಲ್‌ ಸಂಘಟನೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಶೋಪಿಯಾನ್‌ ಹಾಗೂ ಪುಲ್ವಾಮಾ ಜಿಲ್ಲೆಗಳಲ್ಲಿ ನಡೆಯಲಿರುವ ಚುನಾವಣೆಯ ಸಂದರ್ಭದಲ್ಲಿ ಮತದಾನ ಮಾಡುವವರನ್ನು ಕೊಲ್ಲುವುದಾಗಿ ಸ್ಥಳೀಯ ಉಗ್ರ ಸಂಘಟನೆ ಹಿಜ್ಬುಲ್‌ ಮುಜಾಹಿದೀನ್‌ ಎಚ್ಚರಿಕೆ ನೀಡಿದೆ.

ದಕ್ಷಿಣ ಕಾಶ್ಮೀರದ ಈ ಎರಡು ಜಿಲ್ಲೆಗಳಲ್ಲಿ ಮೇ 6ರಂದು ಕೊನೆಯ ಹಂತದ ಮತದಾನ ನಡೆಯಲಿದೆ.

ಶೋಪಿಯಾನ್‌ ಜಿಲ್ಲೆಯ ಅನೇಕ ಕಡೆಗಳಲ್ಲಿ ಗೋಡೆಗಳು ಹಾಗೂ ವಿದ್ಯುತ್‌ ಕಂಬಗಳಿಗೆ ಈ ಎಚ್ಚರಿಕೆಯ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಆದರೆ ಸಂಘಟನೆಯವರೇ ಇವುಗಳನ್ನು ಅಂಟಿಸಿದ್ದಾರೆಯೇ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

‘ಮತ ಚಲಾಯಿಸುವಂತೆ ಸೇನೆಯು ನಿಮ್ಮ ಮೇಲೆ ಒತ್ತಡ ಹಾಕುವ ಸಾಧ್ಯತೆ ಇದೆ ಎಂಬ ಮಾಹಿತಿ ನಮಗೆ ಲಭ್ಯವಾಗಿದೆ. ಆದರೆ ನಾವು ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯ. ಅಂದು ಯಾರು ಮತ ಚಲಾಯಿಸುತ್ತಾರೂ ಅವರನ್ನು ಕೊಲ್ಲಲಾಗುವುದು’ ಎಂದು ಪೋಸ್ಟರ್‌ಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

ಚುನಾವಣಾ ಆಯೋಗವು ಈ ಒಂದು ಲೋಕಸಭಾ ಕ್ಷೇತ್ರಕ್ಕೆ ಮೂರು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು