ಉತ್ತರ ಪ್ರದೇಶ| ಸಿಎಎ ವಿರೋಧಿಸಿದವರ ಹೆಸರುಗಳ ಫಲಕ ಪ್ರದರ್ಶನ: ನಾಳೆ ತೀರ್ಪು

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್ ಫಲಕಗಳನ್ನು ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿತ್ತು. ಈ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.
ಫಲಕಗಳನ್ನು ಪ್ರದರ್ಶಿಸಿರುವ ಪ್ರಕರಣದ ಬಗ್ಗೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್, ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ನ್ಯಾಯಪೀಠವು, ‘ಪ್ರತಿಭಟನಾಕಾರರ ಚಿತ್ರ ಮತ್ತು ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗಲಭೆ ಆರೋಪಿಗಳ ಚಿತ್ರವಿರುವ ಬ್ಯಾನರ್ ಸಲ್ಲದು: ಅಲಹಾಬಾದ್ ಹೈಕೋರ್ಟ್ ಆದೇಶ
ಆರೋಪಿಗಳ ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ವಿಭಾಗೀಯ ನ್ಯಾಯಪೀಠವು ಸ್ವಪ್ರೇರಣೆಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ್ದು, ಮಾರ್ಚ್ 9 ಸೋಮವಾರ ಮಧ್ಯಾಹ್ನ 2 ಗಂಟೆಗೆ ತೀರ್ಪು ಕಾಯ್ದಿರಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.