ಭಾನುವಾರ, ಜನವರಿ 26, 2020
23 °C

ಎಎಪಿ ಸರ್ಕಾರ ದೆಹಲಿ ಜನತೆಗೆ ಮೋಸ ಮಾಡುತ್ತಿದೆ: ಅಮಿತ್ ಶಾ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರ ಜಾಹೀರಾತು ನೀಡುವ ಮೂಲಕ ದೆಹಲಿ ಜನತೆಗೆ ಮೋಸ ಮಾಡುತ್ತಿರುವುದು ಬಿಟ್ಟರೆ ಬೇರೇನೂ ಮಾಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಆರೋಪಿಸಿದ್ದಾರೆ.

ದೆಹಲಿ ಚುನಾವಣಾ ದಿನಾಂಕ ಪ್ರಕಟವಾಗುವ ಕೆಲವೇ ಕ್ಷಣಗಳ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಫೆಬ್ರುವರಿ 8ಕ್ಕೆ ದೆಹಲಿ ವಿಧಾನಸಭೆ ಚುನಾವಣೆ: 11ಕ್ಕೆ ಫಲಿತಾಂಶ

‘ಬಡವರು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವವರು ಎಎಪಿ ಸರ್ಕಾರದಿಂದ ಅತಿ ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ. ದೆಹಲಿ ಸರ್ಕಾರವು ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿ ಮಾಡುತ್ತಿಲ್ಲ. ಯೋಜನೆ ಅನುಷ್ಠಾನವಾದರೆ ದೆಹಲಿ ಜನರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬಹುದು ಎಂಬ ಭಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಕಾಡುತ್ತಿದೆ’ ಎಂದು ಶಾ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು