ಭಾನುವಾರ, ಜುಲೈ 25, 2021
22 °C

ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ಚಂಡಮಾರುತ ಸಾಧ್ಯತೆ: ಗೃಹ ಸಚಿವ ಅಮಿತ್‌ ಶಾ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Amith shah

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತವು ಬುಧವಾರದ ವೇಳೆಗೆ ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಈ ರಾಜ್ಯಗಳಲ್ಲಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಸೋಮವಾರ ಸಭೆ ನಡೆಸಿದರು. 

‘ಮಹಾರಾಷ್ಟ್ರ, ಗುಜರಾತ್‌, ದಮನ್‌ ಹಾಗೂ ದಿಯು, ದಾದ್ರ ಹಾಗೂ ನಗರ್‌ ಹವೇಲಿಗೆ ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಲಾ 45 ಸಿಬ್ಬಂದಿಗಳಿರುವ 23 ತಂಡಗಳನ್ನು ಗೃಹ ಸಚಿವಾಲಯ ನಿಯೋಜಿಸಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ: 

‘ಎನ್‌ಡಿಆರ್‌ಎಫ್‌, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ), ಭಾರತೀಯ ಹವಾಮಾನ ಇಲಾಖೆಯ(ಐಎಂಡಿ) ಹಿರಿಯ ಅಧಿಕಾರಿಗಳ ಜೊತೆ ಅಮಿತ್‌ ಶಾ ಅವರು ಸಭೆ ನಡೆಸಿದ್ದಾರೆ’ ಎಂದು ಗೃಹ ಸಚಿವರ ಕಚೇರಿ ಟ್ವೀಟ್‌ ಮಾಡಿದೆ. 

ಗಂಟೆಗೆ 105–110 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತವು ಅಪ್ಪಳಿಸುವ ಸಾಧ್ಯತೆ ಇದ್ದು, ದಕ್ಷಿಣ ಗುಜರಾತ್‌ ಹಾಗೂ ಮಹಾರಾಷ್ಟ್ರದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು