ಹೈದರಾಬಾದ್: ಅನ್ಯ ಜಾತಿ ಹುಡುಗನನ್ನು ಪ್ರೀತಿಸಿ, ಗರ್ಭಿಣಿಯಾದ ಕಾರಣಕ್ಕೆ 20 ವರ್ಷದ ಮಗಳನ್ನು ತಂದೆ ತಾಯಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಪ್ರಕರಣ ತೆಲಂಗಾಣದ ಜೋಗುಳಾಂಬ–ಗದ್ವಾಲ್ ಜಿಲ್ಲೆಯ ಕಾಲುಕುಂಟ್ಲದಲ್ಲಿ ಬೆಳಕಿಗೆ ಬಂದಿದೆ.

ಈ ತಂದೆ ತಾಯಿಗೆ ಮೂವರು ಹೆಣ್ಣುಮಕ್ಕಳಿದ್ದು, ಗರ್ಭಿಣಿಯಾದ ಮಗಳಿಗೆ ಗರ್ಭಪಾತ ಮಾಡಿಸಿಕೊ ಎಂದು ಒತ್ತಡ ಹೇರಿದ್ದಾರೆ. ಇದಕ್ಕೆ ವಿರೋಧಿಸಿದ ಆಕೆಯನ್ನು ಮಲಗಿರುವಾಗ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಇದೊಂದು ಹೃದಯಾಘಾತವೆಂಬಂತೆ ಬಿಂಬಿಸಿದ್ದಾರೆ ಎಂದು ಹೇಳಲಾಗಿದೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿಮರ್ಯಾದೆಗೇಡು ಹತ್ಯೆ ಇರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ ಕಾರಣ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕತ್ತು ಹಿಸುಕಿ ಕೊಲೆಯಾಗಿರಬಹುದು ಎಂದು ವರದಿ ತಿಳಿಸಿದೆ. ಮರ್ಯಾದೆಗೆ ಅಂಜಿ ಕೊಲೆ ಮಾಡಿರುವುದಾಗಿ ಪೋಷಕರು ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.