ಕಳ್ಳಬಟ್ಟಿ ದುರಂತ: ಯೋಗಿ ಆದಿತ್ಯನಾಥ್‌ ರಾಜೀನಾಮೆಗೆ ವಿಪಕ್ಷಗಳ ಒತ್ತಾಯ

7

ಕಳ್ಳಬಟ್ಟಿ ದುರಂತ: ಯೋಗಿ ಆದಿತ್ಯನಾಥ್‌ ರಾಜೀನಾಮೆಗೆ ವಿಪಕ್ಷಗಳ ಒತ್ತಾಯ

Published:
Updated:
Prajavani

ಲಖನೌ: ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಸೋಮವಾರ ಉತ್ತರಪ್ರದೇಶ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು.

ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷದ ಶಾಸಕರು ಸ್ಪೀಕರ್‌ ಪೀಠದತ್ತ ಬಳಿ ಧಾವಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಸದಸ್ಯರನ್ನು ಸಮಾಧಾನಪಡಿಸಿದ ಸಂಸದೀಯ ಸಚಿವ ಸುರೇಶ್‌ಕುಮಾರ್ ಖನ್ನಾ, ’ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ‘ ಎಂದು ತಿಳಿಸಿದರು.

ಕಳ್ಳಬಟ್ಟಿ ಸೇವನೆಯಿಂದ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಬಾಲುಪುರ ಮತ್ತು ಸುತ್ತಲಿನ ಗ್ರಾಮಗಳಲ್ಲಿ 24 ಜನ ಮೃತಪಟ್ಟರೆ, ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ 46 ಜನ ಅಸುನೀಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !