ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಸಂದಿಗ್ದ ಪರಿಸ್ಥಿತಿಯಲ್ಲಿ ನಾವೆಲ್ಲರೂ ಸೇನೆ ಜತೆ ನಿಲ್ಲಬೇಕು: ರಾಹುಲ್ ಗಾಂಧಿ

Last Updated 28 ಫೆಬ್ರುವರಿ 2019, 0:59 IST
ಅಕ್ಷರ ಗಾತ್ರ

ನವದೆಹಲಿ: ವಿಪಕ್ಷಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಾಕಿಸ್ತಾನದ ಕೃತ್ಯ ಖಂಡಿಸಿದ್ದು, ನಾಪತ್ತೆಯಾಗಿರುವ ಭಾರತದ ಪೈಲಟ್ ಸುರಕ್ಷಿತವಾಗಿ ಮರಳಲಿ ಎಂದು ಆಶಿಸಿದ್ದಾರೆ.

ವಿಪಕ್ಷಗಳ ಸಭೆಯಲ್ಲಿ 21 ರಾಜಕೀಯ ಪಕ್ಷಗಳು ಭಾಗವಹಿಸಿದ್ದು, ಪಾಕ್ ಪ್ರೇರಿತ ಜೈಷ್- ಎ- ಮೊಹಮ್ಮದ್ ಉಗ್ರ ಸಂಘಟನೆ ಪುಲ್ವಾಮದಲ್ಲಿ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯನ್ನು ಖಂಡಿಸಿದ್ದಾರೆ.

ಆದಾಗ್ಯೂ,ಪ್ರಧಾನಿ ನರೇಂದ್ರ ಮೋದಿಯವರು ಈ ಹೊತ್ತಲ್ಲಿ ಸರ್ವ ಪಕ್ಷಗಳ ಸಭೆ ಕರೆಯಬೇಕಿತ್ತು.ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ರಾಜಕೀಯ ಇರಬಾರದು ಎಂದು ವಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಭಯೋತ್ಪಾದನೆ ವಿರುದ್ದ ಹೋರಾಡುತ್ತಿರುವ ಭಾರತೀಯ ಸೇನೆಗೆ ಬೆಂಬಲ ಸೂಚಿಸಿದ್ದಾರೆ.ಫೆ. 26ರಂದು ಪಾಕ್ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆಯ ಧೈರ್ಯವನ್ನು ವಿಪಕ್ಷಗಳ ಮುಖಂಡರು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT