ಗಣಿಗಾರಿಕೆ ಅಕ್ರಮ: ಗಾಯತ್ರಿ ಪ್ರಜಾಪತಿ ನಿವೇಶನಗಳ ಶೋಧ

ಬುಧವಾರ, ಜೂನ್ 26, 2019
23 °C

ಗಣಿಗಾರಿಕೆ ಅಕ್ರಮ: ಗಾಯತ್ರಿ ಪ್ರಜಾಪತಿ ನಿವೇಶನಗಳ ಶೋಧ

Published:
Updated:

ನವದೆಹಲಿ: ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರ ಮೂರು ಮನೆಗಳು ಸೇರಿದಂತೆ 22 ಸ್ಥಳಗಳಲ್ಲಿ ಸಿಬಿಐ ಬುಧವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾಪತಿ ಅವರಿಗೆ ಸೇರಿದ್ದ ಅಮೇಠಿಯಲ್ಲಿನ ಮೂರು ಮನೆ ಸೇರಿದಂತೆ ಉತ್ತರ ಪ್ರದೇಶ, ದೆಹಲಿಯ 22 ಪ್ರದೇಶಗಳಲ್ಲಿ ಸಿಬಿಐ ತಂಡಗಳು ಶೋಧ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಪ್ರಜಾಪತಿ ಜೈಲುಶಿಕ್ಷೆ ಅನುಭವಿಸುತ್ತಿದ್ದಾರೆ. ಗಣಿಗಾರಿಕೆ ಗುತ್ತಿಗೆ ನೀಡುವ ಭರವಸೆ ನೀಡಿ, ಮಾಜಿ ಸಚಿವರು ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಆರೋಪವನ್ನು ಪ್ರಜಾಪತಿ ತಳ್ಳಿಹಾಕಿದ್ದಾರೆ. 

ಅಖಿಲೇಶ್‌ ಯಾದವ್‌ ಸರ್ಕಾರದಲ್ಲಿ ಗಣಿಗಾರಿಕೆ ಸಚಿವರಾಗಿದ್ದ ಪ್ರಜಾಪತಿ ಅವರು ಸಮಾಜವಾದಿ ಪಕ್ಷದ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು.

ಅಕ್ರಮ ಗಣಿಗಾರಿಕೆ ಕುರಿತು ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನದಂತೆ ತನಿಖೆ ನಡೆಸುತ್ತಿರುವ ಸಿಬಿಐ 2019ರ ಜನವರಿ 2ರಂದು ಮೂರನೇ ಎಫ್‌ಐಆರ್‌ ದಾಖಲಿಸಿದೆ. ಎಫ್‌ಐಆರ್‌ ದಾಖಲಾದ ನಂತರ ಮೊದಲ ಬಾರಿಗೆ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ. 

2012–16ರ ಅವಧಿಯಲ್ಲಿ ಸಮಾಜವಾದಿ ಪಕ್ಷದ(ಎಸ್‌ಪಿ) ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ, ಹಮೀರ್‌ಪುರ್‌ ಜಿಲ್ಲೆಯಲ್ಲಿ ಇ– ಟೆಂಡರ್‌ ಪ್ರಕ್ರಿಯೆ ಉಲ್ಲಂಘಿಸಿ ಗಣಿಗುತ್ತಿಗೆ ನೀಡಲಾಗಿದೆ ಎಂಬ ಆರೋಪವಿದೆ. 

ಇದೇ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಬಿ. ಚಂದ್ರಕಲಾ ವಿರುದ್ಧವೂ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. 

 

 

  

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !