ಭಾನುವಾರ, ಜನವರಿ 19, 2020
24 °C

ವಿಶ್ವವಿದ್ಯಾಲಯಗಳನ್ನು ರಾಜಕೀಯ ಅಡ್ಡೆ ಆಗಲು ಬಿಡುವುದಿಲ್ಲ: ರಮೇಶ್‌ ಪೋಖ್ರಿಯಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Ramesh Pokhriyal

ಡೆಹ್ರಾಡೂನ್: ವಿಶ್ವವಿದ್ಯಾಲಯಗಳು ಕಲಿಕಾ ಕೇಂದ್ರಗಳು, ಅವುಗಳನ್ನು ರಾಜಕೀಯ ಅಡ್ಡೆ ಆಗಲು ಬಿಡುವುದಿಲ್ಲ ಎಂದು ಮಾನವ ಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಹೇಳಿದ್ದಾರೆ. 
 
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ  ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ವಿಶ್ವವಿದ್ಯಾಲಯಗಳಲ್ಲಿ ದೇಶದ ಭವಿಷ್ಯ ರೂಪುಗೊಳ್ಳುತ್ತದೆ. ಅದನ್ನು ರಾಜಕೀಯ ಅಡ್ಡ ಮಾಡಲು ಬಿಡುವುದಿಲ್ಲ ಎಂದಿದ್ದಾರೆ.

ಅದೇ ವೇಳೆ ವಿಪಕ್ಷಗಳು ವಿಶ್ವವಿದ್ಯಾಲಯಗಳನ್ನು ರಾಜಕೀಯಕ್ಕಾಗಿ ಬಳಸುತ್ತಿವೆ ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿನ ಅಲ್ಪಸಂಖ್ಯಾತರು ಭಾರತಕ್ಕೆ ಅಭಯಾರ್ಥಿಗಳಾಗಿ ಬಂದರೆ ಅವರಿಗೆ ದೇಶದ ಪೌರತ್ವ ನೀಡುವುದರಲ್ಲಿ ತಪ್ಪಿಲ್ಲ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು