ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ಏರಿಕೆ ನಿರ್ಧಾರವನ್ನು ಖಾಸಗಿ ಶಾಲೆಗಳು ಮರುಪರಿಶೀಲಿಸಬೇಕು: ಕೇಂದ್ರ ಸಚಿವ 

Last Updated 17 ಏಪ್ರಿಲ್ 2020, 13:59 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ವಾರ್ಷಿಕ ಶುಲ್ಕ ಹೆಚ್ಚಳ ಮಾಡುವ ಮತ್ತು ತ್ರೈಮಾಸಿಕ ಶುಲ್ಕ ಪಡೆಯುವ ನಿರ್ಧಾರವನ್ನು ಖಾಸಗಿ ಶಾಲೆಗಳು ಮರುಪರಿಶೀಲಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಶುಕ್ರವಾರ ಒತ್ತಾಯಿಸಿದ್ದಾರೆ.

"ವಾರ್ಷಿಕ ಶುಲ್ಕ ಹೆಚ್ಚಳ ಮತ್ತು ತ್ರೈಮಾಸಿಕ ಶುಲ್ಕ ಸಂಗ್ರಹದ ನಿರ್ಧಾರವನ್ನು ಖಾಸಗಿ ಶಾಲೆಗಳು ಮರುಪರಿಶೀಲಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ. ಪೋಷಕರು ಮತ್ತು ಶಾಲೆಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಗಳು ಶುಲ್ಕದ ಸಮಸ್ಯೆಯನ್ನು ಬಗೆಹರಿಸುತ್ತವೆ ಎಂದು ನಾನು ಭಾವಿಸುತ್ತೇನೆ,’ ಎಂದು ನಿಶಾಂಕ್‌ ಹೇಳಿದ್ದಾರೆ.

‘ಕೆಲವು ರಾಜ್ಯಗಳು ಈಗಾಗಲೇ ಶಾಲಾ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಇತರ ರಾಜ್ಯಗಳೂ ಸಹ ಇದನ್ನು ಪರಿಗಣಿಸುತ್ತವೆ ಎಂದು ನಾನು ಆಶಿಸುತ್ತೇನೆ’ ಎಂದು ನಿಶಾಂಕ್ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT