ನವೋದಯ ವಿದ್ಯಾಲಯ 5 ಸಾವಿರ ಸೀಟು ಹೆಚ್ಚಳ

7
ಎಚ್‌ಆರ್‌ಡಿ ಸಚಿವಾಲಯದಿಂದ ಅನುಮತಿ

ನವೋದಯ ವಿದ್ಯಾಲಯ 5 ಸಾವಿರ ಸೀಟು ಹೆಚ್ಚಳ

Published:
Updated:

ನವದೆಹಲಿ: ದೇಶದಾದ್ಯಂತ ಜವಾಹರ ನವೋದಯ ವಿದ್ಯಾಲಯಗಳಲ್ಲಿ ಹೆಚ್ಚುವರಿಯಾಗಿ 5 ಸಾವಿರ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಅನುಮತಿ ನೀಡಿದೆ.  

ಕಳೆದ ನಾಲ್ಕು ವರ್ಷಗಳಲ್ಲಿ ಈ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು 9 ಸಾವಿರ ಸ್ಥಾನಗಳಿಗೆ ಹೆಚ್ಚಳ ಮಾಡಲಾಗಿತ್ತು.

ಪ್ರಸ್ತುತ ದೇಶದಾದ್ಯಂತ 46 ಸಾವಿರ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಹೆಚ್ಚುವರಿ 5 ಸಾವಿರ ಸ್ಥಾನಗಳಿಗೆ 2019–20ನೇ ಶೈಕ್ಷಣಿಕ ವರ್ಷದಿಂದ ದಾಖಲಾತಿ ಆರಂಭವಾಗಲಿದೆ. ಇದರಿಂದಾಗಿ ನವೋದಯ ವಿದ್ಯಾಲಯಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆ 51 ಸಾವಿರಕ್ಕೆ ಏರಿಕೆಯಾಗಲಿದೆ.

ಈಗಾಗಲೇ ಪ್ರವೇಶ ಪರೀಕ್ಷೆ ಬರೆಯಲು 31.10 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಹೊಸದಾಗಿ ರಚನೆಯಾಗಿರುವ ಜಿಲ್ಲೆಗಳಲ್ಲಿಯೂ ನವೋದಯ ವಿದ್ಯಾಲಯಗಳನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. 

ಉಚಿತ ವಸತಿ ಶಾಲೆ ಸೌಲಭ್ಯದಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳು ದೊರೆಯಲಿವೆ’ ಎಂದು ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !