ಭಾನುವಾರ, ಜೂಲೈ 5, 2020
28 °C

ಸಿಬಿಎಸ್‌ಇ: 10,12ನೇ ತರಗತಿ ವೇಳಾಪಟ್ಟಿ ನಾಳೆ ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಿಬಿಎಸ್‌ಇ ಪಠ್ಯಕ್ರಮದ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಾಕಿ ಇರುವ ಪರೀಕ್ಷೆಯ ವೇಳಾಪಟ್ಟಿಯನ್ನು ಮೇ 18ರಂದು ಘೋಷಿಸುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಶನಿವಾರ ತಿಳಿಸಿದೆ.

'ಪರೀಕ್ಷೆಯ ವೇಳಾಪಟ್ಟಿ ಅಂತಿಮಗೊಳಿಸುವ ಮೊದಲು ಕೆಲವು ತಾಂತ್ರಿಕ ವಿಷಯಗಳನ್ನು ಸಿಬಿಎಸ್‌ಇ ಪರಿಶೀಲಿಸುತ್ತಿದೆ. ಆದ್ದರಿಂದ ವೇಳಾಪಟ್ಟಿ ಬಿಡುಗಡೆ ಮುಂದೂಡಲಾಯಿತು' ಎಂದು ಸಚಿವ ರಮೇಶ್‌ ಪೋಖರಿಯಾಲ್‌ ನಿಶಂಕ್‌ ಟ್ವೀಟ್‌ ಮಾಡಿದ್ದಾರೆ. ಈ ಮೊದಲು ಶನಿವಾರ ಸಂಜೆ 5 ಗಂಟೆಗೆ ವೇಳಾಪಟ್ಟಿ ಪ್ರಕಟಿಸುವುದಾಗಿ ಸಚಿವಾಲಯ ಹೇಳಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು