ಗುರುವಾರ , ಜೂಲೈ 9, 2020
29 °C

ಅಪರಿಚಿತನಿಂದ ಗುಂಡಿನ ದಾಳಿ: ಒಂದೇ ಕುಟುಂಬದ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಗೋಪಾಲ್‌ಗಂಜ್: ಇಲ್ಲಿನ ಹತುವಾ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಯೊಬ್ಬ ಕುಟುಂಬವೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪತಿ-ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರ ಪುತ್ರನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ನೀಡುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿಯ ಮತ್ತೊಬ್ಬ ಪುತ್ರ ಉತ್ತರ ಪ್ರದೇಶದ ಗೋರಖ್‌ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಕುರಿತಾಗಿ ಮಾಹಿತಿ ಲಭ್ಯವಾಗಿದ್ದು, ತನಿಖೆಯನ್ನು ಕೈಗೊಂಡಿದ್ದೇವೆ ಎಂದು ಬಿಹಾರದ ಡಿಜಿಪಿ ಗುಪ್ತೇಶ್ವರ್ ಪಾಂಡೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು