ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ: ನಾಲ್ವರು ಆರೋಪಿಗಳ ಬಂಧನ

Last Updated 29 ನವೆಂಬರ್ 2019, 12:08 IST
ಅಕ್ಷರ ಗಾತ್ರ

ಹೈದರಾಬಾದ್‌: 26 ವರ್ಷದ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ದೇಹವನ್ನು ಸುಟ್ಟುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಶುಕ್ರವಾರ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತೆಲಂಗಾಣದ ಶೆಡ್‌ ನಗರದಲ್ಲಿರುವ ಮನೆಯಿಂದ ಅವರು ಕೆಲಸ ಮಾಡುತ್ತಿದ್ದ ಪಶು ಆಸ್ಪತ್ರೆಗೆ ತೆರೆಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪರಿಗಣಿಸಿರುವ ಪೊಲೀಸರು ಟ್ರಕ್ ಚಾಲಕ, ಆತನ ಸಹಚರ ಮತ್ತು ಇತರೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ, ತೊಂಡುಪಲ್ಲಿ ಟೋಲ್ ಪ್ಲಾಜಾ ಬಳಿಯಲ್ಲಿ ಸಂತ್ರಸ್ತೆಯು ತನ್ನ ದ್ವಿಚಕ್ರ ವಾಹನ ಪಾರ್ಕಿಂಗ್ ಮಾಡುತ್ತಿರುವುದನ್ನು ಅರಿತು ನಾಲ್ವರು ಆರೋಪಿಗಳು ಆಕೆಯನ್ನು ಅಪಹರಿಸಲು ಯೋಜನೆ ರೂಪಿಸಿದ್ದಾರೆ.

ವಾಹನವನ್ನು ತೆಗೆದುಕೊಳ್ಳಲು ಆಕೆ ಬರುತ್ತಾಳೆ ಎಂದು ಊಹಿಸಿದ ಅವರು ಟೈರ್‌ನ ಗಾಳಿಯನ್ನು ಹೊರಬಿಟ್ಟಿದ್ದಾರೆ. ರಾತ್ರಿ ಸುಮಾರು 8ಗಂಟೆ ವೇಳೆಗೆ ವಾಹನವನ್ನು ತೆಗೆದುಕೊಂಡು ಹೋಗಲು ಬಂದಾಗ ಇಬ್ಬರು ಅದನ್ನು ಸರಿಪಡಿಸಲು ಸಹಾಯ ಮಾಡುವುದಾಗಿ ಹೇಳಿ ದ್ವಿಚಕ್ರ ವಾಹನವನ್ನು ಅಲ್ಲಿಂದ ತೆಗೆದುಕೊಂಡು ಹೋಗಿದ್ದಾರೆ.

ವಾಹನವನ್ನು ತೆಗೆದುಕೊಂಡು ಹೋದ ಇಬ್ಬರಿಗಾಗಿ ಆಕೆ ಕಾಯುತ್ತಿರುವಾಗ ಮತ್ತಿಬ್ಬರು ಬಂದು ಆಕೆಯನ್ನು ಅಪಹರಿಸಿದ್ದಾರೆ ಮತ್ತು ಟೋಲ್‌ನಿಂದ 50 ಮೀ ದೂರವಿದ್ದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಮತ್ತು ಹತ್ಯೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT