ಭಾರತೀಯ ವಾಯುಪಡೆಯ AN-32 ವಿಮಾನ ನಾಪತ್ತೆ

ಭಾನುವಾರ, ಜೂನ್ 16, 2019
30 °C

ಭಾರತೀಯ ವಾಯುಪಡೆಯ AN-32 ವಿಮಾನ ನಾಪತ್ತೆ

Published:
Updated:

ನವದೆಹಲಿ: ಅಸ್ಸಾಂನ ಜೋರ್ಹಾಟ್‌ನಿಂದ ಅರುಣಾಚಲ ಪ್ರದೇಶದ ಮೆಚುಕಾದತ್ತ ಹೊರಟಿದ್ದ ಭಾರತೀಯ ವಾಯುಪಡೆಯ  AN-32 ವಿಮಾನ ಸೋಮವಾರ ನಾಪತ್ತೆಯಾಗಿದೆ.

ಮಧ್ಯಾಹ್ನ 12.25ಕ್ಕೆ ಜೋರ್ಹಾಟ್‌ ವಾಯುನೆಲೆಯಿಂದ ಹೊರಟಿದ್ದ ವಿಮಾನ 1 ಗಂಟೆಯ ಹೊತ್ತಿಗೆ ಸಂಪರ್ಕ ಕಳೆದುಕೊಂಡಿತ್ತು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. ವಿಮಾನದಲ್ಲಿ ಭಾರತೀಯ ವಾಯಸೇನೆಯ 13 ಮಂದಿ ಇದ್ದರು.

 ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಮಾನ ನಾಪತ್ತೆಯಾಗಿರುವ ಸಂಗತಿ ಬಗ್ಗೆ  ಟ್ವೀಟ್ ಮಾಡಿದ್ದು ವಿಮಾನದ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ ಎಂದಿದ್ದಾರೆ.

ವಿಮಾನ ಎಲ್ಲಿ ನಾಪತ್ತೆಯಾಗಿದೆ ಎಂಬುದರ ಬಗ್ಗೆ ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ರಕ್ಷಣಾ ಸಚಿವಾಲಯದ ಲೆಫ್ಟನೆಂಟ್ ಕರ್ನಲ್ ಪಿ. ಖೊಂಗಸೈ ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !