ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:54 IST
ಅಕ್ಷರ ಗಾತ್ರ

ಮುಂಬೈ: ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆಯು ದಾಳಿ ನಡೆಸಿದ ಬೆನ್ನಲ್ಲೇ ಮುಂಬೈನಲ್ಲಿ ಭಾರಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ಶಾಲೆಗಳ ಆಡಳಿತ ಹಾಗೂ ಶಾಲಾ ವಾಹನಗಳ ಮಾಲೀಕರುಗಳು ಮುನ್ನೆಚ್ಚರಿಕೆಯ ದೃಷ್ಟಿಯಿಂದ ಮಕ್ಕಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ಸರ್ಕಾರಸೂಚನೆ ನೀಡಿದೆ.

ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು, ನಗರದ ಎಲ್ಲ ಭಾಗಗಳಲ್ಲಿ ರಕ್ಷಣೆಯನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕರುಗಳಿಗೂ ಕರೆ ನೀಡಿದ್ದಾರೆ.

ಗುಪ್ತಚರ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಪೊಲೀಸ್‌ ಇಲಾಖೆಗೆ ಸಲಹೆ ನೀಡಿದ ಬಳಿಕ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಮತ್ತಿತರೆ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತಷ್ಟು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಪಾಕಿಸ್ತಾನದ ಬಲಾಕೋಟ್‌ನಲ್ಲಿರುವ ಜೈಷ್‌–ಎ–ಮೊಹಮದ್ ಉಗ್ರ ಸಂಘಟನೆಯ ನೆಲೆಗಳನ್ನು ಗುರಿಯಾಗಿರಿಸಿದ್ದ ವಾಯುಪಡೆಯು ಮಂಗಳವಾರ ಬೆಳಗ್ಗಿನ ಜಾವ 3.45ಕ್ಕೆ ಅತ್ಯಂತ ಚುರುಕು ಮತ್ತು ನಿಖರ ದಾಳಿ ಸಂಘಟಿಸಿತ್ತು. ಈ ವೇಳೆ 350ಕ್ಕೂ ಹೆಚ್ಚು ಉಗ್ರರು ನಿರ್ನಾಮವಾಗಿದ್ದರು.

ಇನ್ನಷ್ಟು ಓದು

*ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ
*ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!
*ಪಾಕ್‍ ವಿರುದ್ಧ ವೈಮಾನಿಕ ದಾಳಿ ನಡೆಸಿದ ಐಎಎಫ್‍ಗೆ ಟ್ವೀಟ್ ಪ್ರಶಂಸೆ
*ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ
*ಇಂದಿನ ದಾಳಿ ನವ ಭಾರತದ ಸಂಕಲ್ಪದ ಮುನ್ನುಡಿ: ಅಮಿತ್‌ ಶಾ
*ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ
*ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ
*ಉಗ್ರರ ಶಿಬಿರಗಳನ್ನೇ ಗುರಿಯಾಗಿರಿಸಿ ಕಾರ್ಯಾಚರಣೆ ಮಾಡಲಾಗಿದೆ: ವಿಜಯ್ ಗೋಖಲೆ
*ಪುಲ್ವಾಮಾ ದಾಳಿಗೆ ಪ್ರತೀಕಾರ: ಉಗ್ರರ ವಿರುದ್ಧ ಭಾರತ ‘ಯುದ್ಧ’
*ನಮ್ಮ ಸರ್ಕಾರ ಬಳಸುತ್ತಿರುವ ‘ನಾನ್–ಮಿಲಿಟರಿ ಆಕ್ಷನ್’ ಪದಗಳ ಅರ್ಥವೇನು
*ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT