ಭಾನುವಾರ, ಸೆಪ್ಟೆಂಬರ್ 27, 2020
21 °C

‘ಗಾಂಧಿ ಪ್ರತಿಮೆ ನಿರ್ಮೂಲನಕ್ಕೆ ಸಕಾಲ’ ಎಂದಿದ್ದ ಅಧಿಕಾರಿ ನಿಧಿ ಚೌಧರಿ ವರ್ಗ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ಮಹಾತ್ಮ ಗಾಂಧಿಯವರ ಪ್ರತಿಮೆಗಳ ನಿರ್ಮೂಲನೆಗೆ ಸಕಾಲ’ ಎಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿ ಅವರನ್ನು ವರ್ಗಾವಣೆ ಮಾಡಲಾಗಿದೆ. 

‘ಮುಂಬೈ ಮಹಾನಗರ ಪಾಲಿಕೆಯಿಂದ ಅವರನ್ನು ನೀರು ಸರಬರಾಜು ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಈ ರೀತಿ ಟ್ವೀಟ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ: ‘ಗಾಂಧಿ ಪ್ರತಿಮೆ ನಿರ್ಮೂಲನಕ್ಕೆ ಸಕಾಲ’- ಮಹಾರಾಷ್ಟ್ರ ಐಎಎಸ್‌ ಅಧಿಕಾರಿ​

‘ಗಾಂಧಿ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕಾಗಿ ಚೌಧರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನಿಧಿ ಚೌಧರಿ ಅವರನ್ನು ವರ್ಗಾವಣೆ ಮಾಡಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು