ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ಈವರೆಗೆ 1.6 ಲಕ್ಷ ಕೋವಿಡ್ ಪರೀಕ್ಷೆ

Last Updated 11 ಏಪ್ರಿಲ್ 2020, 2:38 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಏಪ್ರಿಲ್ 10ರ ವರೆಗೆ 1,61,330 ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

‘ಏಪ್ರಿಲ್ 10ರಂದು ರಾತ್ರಿ 9 ಗಂಟೆಯ ವರೆಗೆ 1,47,034 ಮಂದಿಯಿಂದ ಸಂಗ್ರಹಿಸಲಾದ 1,61,330 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಐಸಿಎಂಆರ್ ಪ್ರಕಟಣೆ ತಿಳಿಸಿದೆ.

ಕೊರೊನಾ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಕೋವಿಡ್ ಲಕ್ಷಣ ಹೊಂದಿರುವ ಎಲ್ಲ ಪ್ರಕರಣಗಳನ್ನೂ ಪರೀಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಪರೀಕ್ಷೆಗಾಗಿ ದೇಶದಾದ್ಯಂತ 213 ಪ್ರಯೋಗಾಲಯಗಳು ಕಾರ್ಯಾಚರಿಸುತ್ತಿವೆ. ಈ ಪೈಕಿ 146 ಸರ್ಕಾರಿ ಮತ್ತು 67 ಖಾಸಗಿ ಪ್ರಯೋಗಾಲಯಗಳಾಗಿವೆ ಎಂದು ಐಸಿಎಂಆರ್ ಹೇಳಿದೆ.

ಶುಕ್ರವಾರ ರಾತ್ರಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 6,761 ಕ್ಕೆ ಏರಿಕೆಯಾಗಿದೆ. ಈ ಪೈಕಿ 515 ಜನರು ಗುಣಮುಖರಾಗಿದ್ದು, 206 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT