ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರ‍್ಯಾಪಿಡ್‌ ಆ್ಯಂಟಿಬಾಡಿ’ ಪರೀಕ್ಷೆಗೆ ಸಲಹೆ

Last Updated 5 ಏಪ್ರಿಲ್ 2020, 18:04 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕು ಇರುವುದನ್ನು ಖಚಿತಪಡಿಸಿಕೊಳ್ಳಲು ‘ರ‍್ಯಾಪಿಡ್‌ ಆ್ಯಂಟಿಬಾಡಿ ಬ್ಲಡ್‌ ಟೆಸ್ಟ್‌’ ನಡೆಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದ್ದು, ಈ ಬಗ್ಗೆ ಮತ್ತಷ್ಟು ಪ್ರಚಾರ ಕೈಗೊಳ್ಳುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗೆ ತಿಳಿಸಿದೆ.

ಈ ಕುರಿತು ಐಸಿಎಂಆರ್‌ ಮಹಾ ನಿರ್ದೇಶಕ ಬಲರಾಮ್‌ ಭಾರ್ಗವ, ಸಚಿವಾಲಯದ ಕಾರ್ಯದರ್ಶಿ ಪ್ರೀತಿ ಸೂದನ್‌ ಅವರಿಗೆ ಪತ್ರ ಬರೆದಿದ್ದಾರೆ.

‘ಕೋವಿಡ್‌–19 ದೃಢಪಡಿಸುವ ಸಲುವಾಗಿ ದೇಶದ ವಿವಿಧ ಪ್ರಯೋಗಾಲಯಗಳಲ್ಲಿ ಪ್ರಸ್ತುತ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದ್ದರೂ, ಇನ್ನೂ ಹೆಚ್ಚಿನ ಸಾಮರ್ಥ್ಯ ಹೊಂದುವ ಅಗತ್ಯವಿದೆ. ಈ ಅವಧಿಯಲ್ಲಿ ರ‍್ಯಾಪಿಡ್‌ ಟೆಸ್ಟ್‌ ಕಿಟ್‌ಗಳು ಶೀಘ್ರದಲ್ಲಿ ಕೈಸೇರಲಿದ್ದು, ಈ ಪರೀಕ್ಷಾ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT