ಮಂಗಳವಾರ, ಸೆಪ್ಟೆಂಬರ್ 21, 2021
25 °C

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಐಇಡಿ ಸ್ಫೋಟ; ಸೇನಾಧಿಕಾರಿ ಹುತಾತ್ಮ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಯೋಧನೊಬ್ಬ ಗಾಯಗೊಂಡಿದ್ದು, ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಪಡೆಯ ವಕ್ತಾರ ಲೆ.ಕರ್ನಲ್ ದೇವೇಂದರ್ ಆನಂದ್  ಹೇಳಿದ್ದಾರೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಲಾಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶನಿವಾರ ಸಂಜೆ 3 ಗಂಟೆಗೆ ನಡೆದ ಸ್ಫೋಟದಲ್ಲಿ  ಮೇಜರ್ ರ‍್ಯಾಂಕ್ ನ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಸೇನಾಧಿಕಾರಿ ಮತ್ತು ಯೋಧ ಗಸ್ತು ತಿರುಗುತ್ತಿದ್ದಾಗ ಮಣ್ಣಿನಲ್ಲಿ ಹೂತಿರುವ ವಸ್ತುವೊಂದು ಪತ್ತೆಯಾಗಿತ್ತು. ಅದನ್ನು ಪರಿಶೀಲಿಸಲು ಮುಂದಾದಾಗ ಐಇಡಿ ಸ್ಫೋಟಗೊಂಡಿದ್ದು ಇದರಲ್ಲಿ ಸೇನಾಧಿಕಾರಿ ಸಾವಿಗೀಡಾಗಿದ್ದಾರೆ ಮತ್ತು ಯೋಧ ಗಾಯಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು