ಉತ್ತರ ಪ್ರದೇಶ: ಉಪಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧ ಎಂದ ಅಖಿಲೇಶ್

ಗುರುವಾರ , ಜೂನ್ 20, 2019
30 °C
ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿಕೆಗೆ ಪ್ರತಿಕ್ರಿಯೆ

ಉತ್ತರ ಪ್ರದೇಶ: ಉಪಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧ ಎಂದ ಅಖಿಲೇಶ್

Published:
Updated:

ಲಖನೌ: ಮೈತ್ರಿ ಮುರಿದಿದೆ ಎಂದಾದಲ್ಲಿ ಏಕಾಂಗಿಯಾಗಿ ಉಪಚುನಾವಣೆ ಎದುರಿಸಲು ನಮ್ಮ ಪಕ್ಷವೂ ಸಿದ್ಧವಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಮೈತ್ರಿ ಮುಂದುವರಿಸದಿರುವ ಬಗ್ಗೆ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಜಗತ್ತಿನಲ್ಲೇ ಅತ್ಯಂತ ದುಬಾರಿ: ದಾಖಲೆಯ ₹60 ಸಾವಿರ ಕೋಟಿ ಖರ್ಚು

ರಾಜ್ಯದ 11 ವಿಧಾನಸಭಾ ಕ್ಷೇತ್ರಗಳ ಶಾಸಕರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದರಿಂದ ಈ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ–ಬಿಎಸ್‌ಪಿ ಮೈತ್ರಿಗೆ ಸೋಲಾದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆ ಮಾಯಾವತಿ ಸೋಮವಾರ ಸುಳಿವು ನೀಡಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಉಪಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ, ಮಾಯಾವತಿ ಸುಳಿವು​

ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್ ಯಾದವ್, ‘ಮೈತ್ರಿ ಮುರಿದಿದೆ ಎಂದಾದಲ್ಲಿ ಸಮಾಜವಾದಿ ಪಕ್ಷ ಚುನಾವಣೆಗೆ ಸಿದ್ಧತೆ ನಡೆಸಲಿದೆ. 11 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ’ ಎಂದಿದ್ದಾರೆ.

‘ಈ ಮೈತ್ರಿಯಿಂದ ಪ್ರಯೋಜನವಿಲ್ಲ. ಮೈತ್ರಿಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಯಾದವ ಸಮುದಾಯದ ಮತ ನಮಗೆ ದೊರೆಯಲಿಲ್ಲ. ಅಖಿಲೇಶ್ ಯಾದವ್ (ಎಸ್‌ಪಿ ನಾಯಕ) ಮತ್ತು ಅವರ ಕುಟುಂಬದವರಿಗೂ ಯಾದವರ ಮತಗಳು ದೊರೆಯಲಿಲ್ಲ’ ಎಂದು ಮಾಯಾವತಿ ಹೇಳಿದ್ದಾರೆ. ಅಖಿಲೇಶ್ ಅವರಿಗೆ ಪತ್ನಿಯನ್ನೇ ಗೆಲ್ಲಿಸಲಾಗಲಿಲ್ಲ ಎಂದೂ ಅವರು ಹೇಳಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 6

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !