ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ ಎನ್‌ಕೌಂಟರ್: ಆರೋಪಿಗಳ ಶವದ ಮರು ಮರಣೋತ್ತರ ಪರೀಕ್ಷೆ

ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ
Last Updated 24 ಡಿಸೆಂಬರ್ 2019, 1:26 IST
ಅಕ್ಷರ ಗಾತ್ರ

ಹೈದರಾಬಾದ್‌: ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ನಂತರ ಪೊಲೀಸರ ಗುಂಡಿಗೆ ಬಲಿಯಾದ ನಾಲ್ವರು ಆರೋಪಿಗಳ ಮೃತದೇಹಗಳ ಮರು ಮರಣೋತ್ತರ ಪರೀಕ್ಷೆ ಸೋಮವಾರ ನಡೆಯಿತು.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಐಐಎಂಎಸ್‌) ವಿಧಿವಿಜ್ಞಾನ ತಜ್ಞರು ಇಲ್ಲಿನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆ ಮತ್ತು ಒಟ್ಟಾರೆ ಪ್ರಕ್ರಿಯೆಯನ್ನು ವಿಡಿಯೊ ಚಿತ್ರೀಕರಣ ಮಾಡಲಾಗಿದೆ ಎಂದು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಪಿ. ಶ್ರವಣ್‌ ಕುಮಾರ್‌ ಹೇಳಿದ್ದಾರೆ.

ವಿಧಿವಿಜ್ಞಾನ ತಜ್ಞರು ಮೃತ ಆರೋಪಿಗಳ ಸಂಬಂಧಿಕರನ್ನು ಭೇಟಿ ಮಾಡಿ ಅವರ ಹೇಳಿಕೆ ಪಡೆದುಕೊಂಡಿದ್ದರು. ಮರಣೋತ್ತರ ಪರೀಕ್ಷೆಯ ವರದಿಯನ್ನು ತಜ್ಞರು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸುವರು ಎಂದೂ ಹೇಳಿದ್ದಾರೆ. ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.

ನಾಲ್ವರು ಆರೋಪಿಗಳ ಮೃತದೇಹಗಳ ಮರು ಮರಣೋತ್ತರ ಪರೀಕ್ಷೆ ನಡೆಸುವಂತೆ ತೆಲಂಗಾಣ ಹೈಕೋರ್ಟ್ ಶನಿವಾರ ಆದೇಶ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT