ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಲ್‌ಆ್ಯಂಡ್‌ಎಫ್‌ಎಸ್‌ ಖಾತೆ ‘ಎನ್‌ಪಿಎ’ ಪರಿಗಣನೆ: ಆರ್‌ಬಿಐ

Last Updated 17 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಸಾಲದ ಸುಳಿಗೆ ಸಿಲುಕಿರುವ ಇನ್‌ಫ್ರಾಸ್ಟ್ರಕ್ಚರ್‌ ಲೀಸಿಂಗ್‌ ಆ್ಯಂಡ್‌ ಫೈನಾನ್ಶಿಯಲ್‌ ಸರ್ವಿಸಸ್‌ನ (ಐಎಲ್‌ಆ್ಯಂಡ್‌ಎಫ್‌ಎಸ್‌) ಖಾತೆಗಳನ್ನು ಬ್ಯಾಂಕ್‌ಗಳು ವಸೂಲಾಗದ ಸಾಲ (ಎನ್‌ಪಿಎ) ಎಂದು ಪರಿಗಣಿಸಬೇಕು ಎಂದು ಆರ್‌ಬಿಐ ತಿಳಿಸಿದೆ.

ತೊಂಬತ್ತು ದಿನಗಳಲ್ಲಿ ಸಾಲ ಮರುಪಾವತಿಯ ಕಂತು ಪಾವತಿಸದ ಯಾವುದೇ ಸಾಲವನ್ನು ‘ಎನ್‌ಪಿಎ’ ಎಂದು ವಿಂಗಡಿಸುವುದು ಬ್ಯಾಂಕ್‌ಗಳ ಹೊಣೆಗಾರಿಕೆಯಾಗಿದೆ. ಈ ಪ್ರಕ್ರಿಯೆಯನ್ನು ಪ್ರತಿಯೊಂದು ಬ್ಯಾಂಕ್‌ ಕಡ್ಡಾಯವಾಗಿ ಅನುಸರಿಸಬೇಕು ಎಂದು ಆರ್‌ಬಿಐ, ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ಗಮನಕ್ಕೆ ತಂದಿದೆ.

ನ್ಯಾಯಸಮ್ಮತ ಲೆಕ್ಕಪತ್ರಕ್ಕೆ ಬ್ಯಾಂಕ್‌ಗಳ ಹಣಕಾಸು ಪರಿಸ್ಥಿತಿಯ ನೈಜ ಚಿತ್ರಣ ಇರಬೇಕು. ಆಗ ‘ಎನ್‌ಪಿಎ’ ಬಗ್ಗೆ ಮುಂಚಿತವಾಗಿ ಮಾಹಿತಿ ಸಿಗುತ್ತದೆ ಎಂದು ಹಿರಿಯ ವಕೀಲ ಗೋಪಾಲ್‌ ಜೈನ್‌ ಆರ್‌ಬಿಐ ಪರ ವಾದ ಮಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT