ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ 2–3 ದಿನಗಳಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ಹವಾಮಾನ ಇಲಾಖೆ ಮಾಹಿತಿ
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಎರಡು ಮೂರು ದಿನಗಳಲ್ಲಿ ಗುಜರಾತ್ ಮತ್ತು ಉತ್ತರ ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ.

ಜೂನ್ 3ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಮುಂಬೈ ಮೂಲದ ಪ್ರಾದೇಶಿಕ ಹವಾಮಾನ ಕೇಂದ್ರವು ಚಂಡಮಾರುತದ ಬೆಳವಣಿಗೆಗಳ ಮತ್ತು ತೀವ್ರತೆ ಮೇಲೆ ನಿಗಾ ಇರಿಸಿದೆ.

ಆಗ್ನೇಯ, ಪೂರ್ವ ಕೇಂದ್ರ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇದು ಜೂನ್ 3ರ ವೇಳೆಗೆ ಉತ್ತರ ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಬಹುದು ಇಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತ ಮತ್ತು ಅದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಮೇಲೆ ನಿಗಾ ಇರಿಸಿದ್ದೇವೆ ಎಂದು ಹವಾಮಾನ ಇಲಾಖೆಯ ಉಪಪ್ರಧಾನ ನಿರ್ದೇಶಕರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳಕ್ಕೆಅಂಪನ್ ಚಂಡಮಾರುತ ಅಪ್ಪಳಿಸಿ ಅಪಾರ ಹಾನಿಯಾಗಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT