ಕೇರಳದಲ್ಲಿ ಮತ್ತೆ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌

7

ಕೇರಳದಲ್ಲಿ ಮತ್ತೆ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌

Published:
Updated:

ತಿರುವನಂತಪುರ: ಪ್ರವಾಹ ಮತ್ತು ಭೂಕುಸಿತದಿಂದ ತತ್ತರಸಿರುವ ಕೇರಳದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದೆ.

ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರ ಜತೆಗೆ, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ತಿರುವನಂತಪುರ, ಕೊಲ್ಲಂ ಮತ್ತು ಕಾಸರಗೋಡು ಹೊರತುಪಡಿಸಿ 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
 

ಮಳೆ ಸಂಬಂಧಿ ಅವಘಡಗಳ ಬಗ್ಗೆ ಎಚ್ಚರದಿಂದ ಇರುವಂತೆ ಕೊಲ್ಲಂ ಮತ್ತು ಕಾಸರಗೋಡು ಜಿಲ್ಲೆಯ ಅಧಿಕಾರಿಗಳಿಗೂ ಸೂಚಿಸಲಾಗಿದೆ.

ಈ ಮಧ್ಯೆ, ಪ್ರವಾಹಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ₹500 ಕೋಟಿ ಪರಿಹಾರ ಘೋಷಿಸಿದ್ದಾರೆ. ಹಲವು ರಾಜ್ಯಗಳು ಕೇರಳಕ್ಕೆ ವಿವಿಧ ರೀತಿಯಲ್ಲಿ ಸಹಾಯಹಸ್ತ ಚಾಚಿವೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ₹25 ಕೋಟಿ, ಪಂಜಾಬ್‌ ಮತ್ತು ದೆಹಲಿ ಸರ್ಕಾರಗಳು ತಲಾ ₹10 ಕೋಟಿ ಹಾಗೂ ಆಂಧ್ರ ಪ್ರದೇಶ ₹5 ಕೋಟಿ ಪರಿಹಾರ ಘೋಷಿಸಿವೆ.

ಇನ್ನಷ್ಟು...

ಜಲಪ್ರಳಯದಲ್ಲಿ ನಲುಗಿದೆ ಕೇರಳ: ವಿವಿಧ ರಾಜ್ಯಗಳಿಂದ ಪರಿಹಾರ ಸಹಕಾರ

ಕೇರಳ ಪ್ರವಾಹ ಮಾನವ ನಿರ್ಮಿತ ದುರಂತ: ಮಾಧವ ಗಾಡ್ಗೀಳ್

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !