ಶನಿವಾರ, ಜುಲೈ 31, 2021
28 °C

ರೈಲು ವ್ಯವಸ್ಥೆ ಮಾಡಬೇಕೆಂದು ಅಮೃತಸರದಲ್ಲಿ ವಲಸೆ ಕಾರ್ಮಿಕರ ಪ್ರತಿಭಟನೆ

ಎಎನ್ಐ Updated:

ಅಕ್ಷರ ಗಾತ್ರ : | |

ಪಂಜಾಬ್: ಪ್ರತ್ಯೇಕ ರೈಲು ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಅಮೃತಸರದಲ್ಲಿ ವಲಸೆ ಕಾರ್ಮಿಕರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮಹಿಳೆಯರು, ಪುರುಷರು ಹಾಗೂ ಮಕ್ಕಳೂ ಸೇರಿ ಸುಮಾರು ನೂರಕ್ಕೂ ಹೆಚ್ಚು ಮಂದಿ ಕಾರ್ಮಿಕರು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಧಾವಿಸಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಪೊಲೀಸ್ ಠಾಣೆ ಎಸ್‌ಎಚ್‌ಒ ಶಿವದರ್ಶನ್ ಸಿಂಗ್, ಪ್ರತಿಭಟನಾಕಾರರು ತಮಗೆ ಚತ್ತೀಸ್‌ಗಡಕ್ಕೆ ತಲುಪಲು ರೈಲು ವ್ಯವಸ್ಥೆ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎಂದಿದ್ದಾರೆ. ಈ ವಿಷಯ ಜಿಲ್ಲಾಡಳಿತಕ್ಕೆ ವಿಷಯ ತಲುಪಿಸಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು