ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿದ ಮಾಲಿನ್ಯ: ಬೆಚ್ಚಿಬಿದ್ದ ದೆಹಲಿ,ಸಮ,ಬೆಸ ಸಂಖ್ಯೆ ವಾಹನ ಸಂಚಾರಕ್ಕೆ ಚಿಂತನೆ

Last Updated 25 ಡಿಸೆಂಬರ್ 2018, 19:37 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಅಪಾಯದ ಮಟ್ಟ ತಲುಪಿದೆ. ಸತತ ನಾಲ್ಕನೇ ದಿನವಾದ ಮಂಗಳವಾರವೂ ವಾಯು ಗುಣಮಟ್ಟ ಕುಸಿತ ಕಂಡಿದ್ದು, ಚಳಿಯೂ ಹೆಚ್ಚಾಗಿದೆ.

ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಿಸಲು ಅಗತ್ಯ ಬಿದ್ದರೆ ಮತ್ತೆ ನಗರದಲ್ಲಿ ಸಮ, ಬೆಸ ಸಂಖ್ಯೆ ವಾಹನ ಸಂಚಾರ ಪದ್ಧತಿ ಜಾರಿಗೆ ತರಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದೇ ರೀತಿ ಮುಂದುವರಿದರೆ ಶಾಲೆಗಳಿಗೆ ರಜೆ ಮತ್ತು ಭಾರಿ ವಾಹನ ಸಂಚಾರ ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ವಾಯು ಗುಣಮಟ್ಟ ಸೂಚ್ಯಂಕ ಕೂಡ ಗಂಭೀರ ಮಟ್ಟದಲ್ಲಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ದೆಹಲಿ ಸುತ್ತಮುತ್ತ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.

ಹೆಪ್ಪುಗಟ್ಟಿದ ದಾಲ್‌ ಸರೋವರ

ಉತ್ತರ ಭಾರತದ ಬಹುತೇಕ ಕಡೆಗಳಲ್ಲಿ ಶೀತಗಾಳಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್‌ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 11 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದ್ದು, ಶ್ರೀನಗರದ ಪ್ರಸಿದ್ಧ ದಾಲ್‌ ಸರೋವರ ಭಾಗಶಃ ಹೆಪ್ಪುಗಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT