ಭಾನುವಾರ, ಡಿಸೆಂಬರ್ 6, 2020
19 °C

ಮಲ್ಯಗೆ ಆಶ್ರಯ ಬೇಡ: ಬ್ರಿಟನ್‌ಗೆ ಭಾರತ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರು ಆಶ್ರಯ ಕೋರಿ ಸಲ್ಲಿಸುವ ಯಾವುದೇ ಮನವಿಯನ್ನು ಪರಿಗಣಿಸಬಾರದು ಎಂದು ಭಾರತ ಗುರುವಾರ ಬ್ರಿಟನ್‌ಗೆ ಹೇಳಿದೆ. 

ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇಲ್ಲವೆಂದು ಬ್ರಿಟನ್ ಕಳೆದ ವಾರವೇ ಸೂಚನೆ ನೀಡಿತ್ತು.  ಹಸ್ತಾಂತರಕ್ಕೂ ಮೊದಲು ಕಾನೂನು ಸಮಸ್ಯೆ ಬಗೆಹರಿಯಬೇಕೆಂದು ಬ್ರಿಟನ್ ಹೇಳಿತ್ತು. 

‘ಮಲ್ಯ ಅವರನ್ನು ಶೀಘ್ರವೇ ಭಾರತಕ್ಕೆ ಹಸ್ತಾಂತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾವು ಬ್ರಿಟನ್‌ನೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತದಲ್ಲಿ ಮಲ್ಯಗೆ ಕಿರುಕುಳ ನೀಡುವ ಕುರಿತು ಯಾವುದೇ ಆಧಾರವಿಲ್ಲ. ಹಾಗಾಗಿ,  ಆಶ್ರಯ ಕೋರಿ ಮಲ್ಯ ಸಲ್ಲಿಸುವ ಮನವಿಯನ್ನು ಪರಿಗಣಿಸಬಾರದು ಎಂದು ಬ್ರಿಟನ್ ಸರ್ಕಾರಕ್ಕೆ ಮನವಿ ಮಾಡಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು ಆನ್‌ಲೈನ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು