ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಗಡಿ ಸಂಘರ್ಷ: ಗುಪ್ತಚರ ವೈಫಲ್ಯ ಆರೋಪ ಅಲ್ಲಗಳೆದ ರಾಜನಾಥ್ ಸಿಂಗ್

Last Updated 19 ಜೂನ್ 2020, 15:15 IST
ಅಕ್ಷರ ಗಾತ್ರ

ನವದೆಹಲಿ: ಚೀನಾ ಪಡೆಗಳೊಂದಿಗೆ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆ ಹಿಂದೆ ಗುಪ್ತಚರ ವೈಫಲ್ಯವಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಗುಪ್ತಚರ ವೈಫಲ್ಯ ಉಂಟಾಗಿಲ್ಲ ಎಂದು ಹೇಳಿದ್ದಾರೆ.

ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದಿದ್ದ ಸಂಘರ್ಷದಲ್ಲಿ ಒಬ್ಬ ಸೇನಾಧಿಕಾರಿ ಸೇರಿದಂತೆ 20 ಯೋಧರು ಹುತಾತ್ಮರಾಗಿದ್ದರು. ಈ ವಿಚಾರ ದೇಶದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ಚೀನಾ ಪಡೆಗಳ ದಾಳಿಯಲ್ಲಿ ಭಾರತದ ಯೋಧರು ಮಡಿಯಲು ಗುಪ್ತಚರ ವೈಫಲ್ಯ ಕಾರಣ ಎಂಬ ಆರೋಪಗಳೂ ವ್ಯಕ್ತವಾಗಿದ್ದವು. ಚೀನಾದ ದಾಳಿಯು ಪೂರ್ವ ನಿಯೋಜಿತ ಎಂಬುದು ಸ್ಪಷ್ಟ. ಕೇಂದ್ರ ಸರ್ಕಾರ ಗಾಢ ನಿದ್ರೆಯಲ್ಲಿದ್ದ ಕಾರಣ ಯೋಧರು ಬೆಲೆ ತೆರಬೇಕಾಯಿತು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ‌ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT