ಗುರುವಾರ , ಜೂಲೈ 9, 2020
28 °C

ಕೋವಿಡ್-19: ಸೋಂಕು ಪ್ರಕರಣಗಳಲ್ಲಿ ಫ್ರಾನ್ಸ್‌ಗಿಂತ ಭಾರತ ಮುಂದು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1,90,000 ದಾಟಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. 

ಕೋವಿಡ್‌-19 ಪ್ರಕರಣಗಳ ಸಂಖ್ಯೆಯಲ್ಲಿ ಫ್ರಾನ್ಸ್ ಅನ್ನು ಹಿಂದಿಕ್ಕಿರುವ ಭಾರತವು ಜಗತ್ತಿನಲ್ಲಿ ಏಳನೇ ಸ್ಥಾನದಲ್ಲಿದೆ. 

ಕಳೆದ 24 ಗಂಟೆಗಳಲ್ಲಿ 8,392 ಹೊಸ ಪ್ರಕರಣಗಳು ದಾಖಲಾಗಿದ್ದು, ಅಮೆರಿಕ, ಬ್ರೆಜಿಲ್, ರಷ್ಯಾ, ಬ್ರಿಟನ್, ಸ್ಪೇನ್ ಮತ್ತು ಇಟಲಿ ದೇಶಗಳ ನಂತರದ ಸ್ಥಾನದಲ್ಲಿ ಭಾರತವಿದೆ ಎಂದು ರಾಯಿಟರ್ಸ್ ತಿಳಿಸಿದೆ.

ಮಾರ್ಚ್‌ನಲ್ಲಿ ದೇಶದಾದ್ಯಂತ ಹೇರಲಾಗಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿದ ನಂತರ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚಾಗಿದೆ.

ಭಾರತದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5394ಕ್ಕೆ ತಲುಪಿದ್ದು, ಯುರೋಪ್‌ ಮತ್ತು ಅಮೆರಿಕ ದೇಶಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ಕಡಿಮೆ ಎಂದೇ ಹೇಳಬಹುದು. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು