ಶನಿವಾರ, ಜುಲೈ 31, 2021
28 °C

Covid-19 India Update: ಕಳೆದ 24 ಗಂಟೆಗಳಲ್ಲಿ 8,171 ಹೊಸ ಪ್ರಕರಣ, 204 ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,171 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 204 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 1,98,706 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5,598 ಜನರು ಸಾವಿಗೀಡಾಗಿದ್ದಾರೆ.

ಸದ್ಯ 97,581 ಪ್ರಕರಣಗಳು ಸಕ್ರಿಯವಾಗಿದ್ದು, 95,527 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 70,013 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,362 ಜನರು ಮೃತರಾಗಿದ್ದಾರೆ. 37,543 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 30,108 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 11,565 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 20,834 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 523 ಮಂದಿ ಮೃತಪಟ್ಟಿದ್ದು, 8,746 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 23,495 ಮಂದಿಗೆ ಸೋಂಕು ತಗುಲಿದ್ದು, 10,141 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 184 ಮಂದಿ ಮೃತಪಟ್ಟಿದ್ದು, 13,170 ಗುಣಮುಖರಾಗಿದ್ದಾರೆ.

ಗುಜರಾತ್‌ನಲ್ಲಿ 17,200 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 5,357 ಸಕ್ರಿಯ ಪ್ರಕರಣಗಳಿದ್ದು, 10,780 ಗುಣಮುಖರಾಗಿದ್ದಾರೆ. 1,063 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: World covid-19 update: ಅಮೆರಿಕದಲ್ಲಿ 18 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 358,  ಪಶ್ಚಿಮ ಬಂಗಾಳದಲ್ಲಿ 325, ಉತ್ತರ ಪ್ರದೇಶದಲ್ಲಿ 217 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು