ಶುಕ್ರವಾರ, ಆಗಸ್ಟ್ 6, 2021
25 °C

Covid-19 India Update | ಒಂದೇ ದಿನದಲ್ಲಿ 8,909 ಕೊರೊನಾ ಪ್ರಕರಣ, 217 ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,909 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 217 ಜನ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.

ದೇಶದಲ್ಲಿ ಈವರೆಗೆ ಒಟ್ಟು 207,615 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5,815 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸದ್ಯ 101,497 ಪ್ರಕರಣಗಳು ಸಕ್ರಿಯವಾಗಿದ್ದು, 100,303 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 72,300 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,465 ಜನರು ಮೃತರಾಗಿದ್ದಾರೆ. 38,502 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 31,333 ಮಂದಿ ಗುಣಮುಖರಾಗಿದ್ದಾರೆ. 

ದೆಹಲಿಯಲ್ಲಿ 12,333 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 22,132 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 556 ಮಂದಿ ಮೃತಪಟ್ಟಿದ್ದು, 9,243 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 24,586 ಮಂದಿಗೆ ಸೋಂಕು ತಗುಲಿದ್ದು, 10,683 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 197 ಮಂದಿ ಮೃತಪಟ್ಟಿದ್ದು, 13,706 ಗುಣಮುಖರಾಗಿದ್ದಾರೆ.

ಗುಜರಾತ್‌ನಲ್ಲಿ 17,200 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 5,357 ಸಕ್ರಿಯ ಪ್ರಕರಣಗಳಿದ್ದು, 10,780 ಗುಣಮುಖರಾಗಿದ್ದಾರೆ. 1,063 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 364,  ಪಶ್ಚಿಮ ಬಂಗಾಳದಲ್ಲಿ 335, ಉತ್ತರ ಪ್ರದೇಶದಲ್ಲಿ 222 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು