ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,380 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 193 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 1,82,143 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5,164 ಜನರು ಸಾವಿಗೀಡಾಗಿದ್ದಾರೆ.
ಸದ್ಯ 89,995 ಪ್ರಕರಣಗಳು ಸಕ್ರಿಯವಾಗಿದ್ದು, 86,983 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್-19ನ ಹೊಡೆತಕ್ಕೆ ತೀವ್ರ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 65,168 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,197 ಜನರು ಮೃತರಾಗಿದ್ದಾರೆ. 34,890 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 28,081 ಮಂದಿ ಗುಣಮುಖರಾಗಿದ್ದಾರೆ.

ಗುಜರಾತ್‌ನಲ್ಲಿ 6,106 ಸಕ್ರಿಯ ಪ್ರಕರಣಗಳಿದ್ದು, 9,230 ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ 10,058 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 18,549 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಿಳುನಾಡಿನಲ್ಲಿ 21, 184 ಮಂದಿಗೆ ಸೋಂಕು ತಗುಲಿದ್ದು, 9,024 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 160 ಮಂದಿ ಮೃತಪಟ್ಟಿದ್ದು, 12,000 ಗುಣಮುಖರಾಗಿದ್ದಾರೆ.

ಇದನ್ನೂ ಓದಿ:  ಲಕ್ಷಣವೇ ಕಾಣಿಸದೆ ಹರಡುತ್ತಿರುವ ಸೋಂಕು: ಐಸಿಎಂಆರ್ ಅಧ್ಯಯನದಲ್ಲಿ ದೃಢ

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 343, ಪಶ್ಚಿಮ ಬಂಗಾಳದಲ್ಲಿ 309, ಉತ್ತರ ಪ್ರದೇಶದಲ್ಲಿ 201 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.