ಭಾನುವಾರ, ಜುಲೈ 25, 2021
21 °C

ಅತಿ ಹೆಚ್ಚು ಕೋವಿಡ್‌ ಪ್ರಕರಣ: ಬ್ರಿಟನ್‌ ಹಿಂದಿಕ್ಕಿ 4ನೇ ಸ್ಥಾನಕ್ಕೆ ಭಾರತ 

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಶ್ವದಲ್ಲಿ ಅತಿಹೆಚ್ಚು ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಶುಕ್ರವಾರ ಬ್ರಿಟನ್‌ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಏರಿದೆ. 

ಮೇ 29ರಂದು 10ನೇ ಸ್ಥಾನದಲ್ಲಿದ್ದ ಭಾರತ ಕೇವಲ 14 ದಿನಗಳಲ್ಲಿ (ಜೂನ್‌ 12) ನಾಲ್ಕನೇ ಸ್ಥಾನಕ್ಕೇರಿದೆ. ಮೇ 29ರಂದು ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,65,386 ಇತ್ತು. 

ಕಳೆದ 24 ಗಂಟೆ ಅವಧಿಯಲ್ಲಿ ಭಾರತದಲ್ಲಿ 10,956 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಇದು ಒಟ್ಟಾರೆ ಸೋಂಕಿತರ ಸಂಖ್ಯೆಯನ್ನು 2,97,535ಕ್ಕೆ ಏರಿಸಿದೆ. ಇನ್ನೊಂದೆಡೆ, ಅಮೆರಿಕದ ಜಾನ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ ಬ್ರಿಟನ್‌ನ ಒಟ್ಟಾರೆ ಸೋಂಕಿತರ ಸಂಖ್ಯೆ 2,92,860 ಆಗಿದೆ. 

ಸಾವಿನ ಪ್ರಮಾಣದಲ್ಲಿ ಬ್ರಿಟನ್‌ ಮುಂದು 

ಭಾರತದ 2,97,535 ಸೋಂಕಿತರಲ್ಲಿ 8,498 ಮಂದಿ ಮೃತಪಟ್ಟಿದ್ದಾರೆ. ಬ್ರಿಟನ್‌ನಲ್ಲಿ 2,92,860 ಸೋಂಕಿತರ ಪೈಕಿ 41,364 ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿ ಭಾರತ ಬ್ರಿಟನ್‌ಗಿಂತ ಮುಂದಿದ್ದರೂ, ಸಾವಿನ ಪ್ರಮಾಣದಲ್ಲಿ ಅಜಗಜಾಂತರ ವ್ಯತ್ಯಾಸಗಳಿರುವುದು ಭಾರತದ ಮಟ್ಟಿಗೆ ಸಮಾಧಾನಕರ ಸಂಗತಿ. 

ಇನ್ನುಳಿದಂತೆ ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ರಷ್ಯಾ(5,01,800), ಬ್ರೆಜಿಲ್‌ (8,02,828), ಅಮೆರಿಕ (20,23,347) ನಮಗಿಂತಲೂ ಮುಂದಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು