ಗುರುವಾರ , ಜುಲೈ 29, 2021
21 °C

ಕೊರೊನಾ: ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ ಎಂದ ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

Coronavirus testing representative image

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆಯ ಉತ್ತುಂಗ ಸ್ಥಿತಿಯಿಂದ ಭಾರತ ಇನ್ನೂ ತುಂಬಾ ದೂರದಲ್ಲಿದೆ. ಇತರ ದೇಶಗಳಿಗೆ ಹೋಲಿಸಿದರೆ ಸೋಂಕು ಹರಡುವಿಕೆ ತಡೆಯುವಲ್ಲಿ ನಾವು ಕೈಗೊಂಡಿರುವ ಕ್ರಮಗಳು ಪರಿಣಾಮಕಾರಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ಸೋಂಕಿತರ ಒಟ್ಟು ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತವು ಏಳನೇ ಸ್ಥಾನದಲ್ಲಿದೆ ಎನ್ನುವುದು ಸರಿಯಲ್ಲ. ದೇಶಗಳ ಜನಸಂಖ್ಯೆಯನ್ನೂ ಗಣನೆಗೆ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಹೇಳಿದ್ದಾರೆ.

ಇದನ್ನೂ ಓದಿ: 

ಸರಾಸರಿ ಭಾರತದಷ್ಟೇ ಜನಸಂಖ್ಯೆ ಹೊಂದಿರುವ 14 ದೇಶಗಳಲ್ಲಿ ಕೊರೊನಾದಿಂದ ಸಂಭವಿಸಿದ ಸಾವಿನ ಪ್ರಮಾಣ 55.2 ಪಟ್ಟು ಹೆಚ್ಚಿದೆ. ನಮ್ಮಲ್ಲಿ ಕೊರೊನಾದಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣ ಶೇಕಡಾ 2.82ರಷ್ಟಿದ್ದರೆ, ಜಾಗತಿಕವಾಗಿ ಇದು ಶೇಕಡಾ 6.13 ರಷ್ಟಿದೆ. ನಿಗದಿತ ಸಮಯದೊಳಗೆ ಸೋಂಕು ಪತ್ತೆ ಮತ್ತು ಸೂಕ್ತ ವೈದ್ಯಕೀಯ ನಿರ್ವಹಣೆಯಿಂದಾಗಿ ಇದು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾದಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣ ದೇಶದಲ್ಲಿ ಒಂದು ಲಕ್ಷ ಜನರಿಗೆ ಶೇಕಡಾ 0.41 ರಷ್ಟಿದೆ. ಜಾಗತಿಕವಾಗಿ ಇದು ಶೇಕಡಾ 4.9 ರಷ್ಟಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು