ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮ ಉಗ್ರರ ದಾಳಿ: ಪಾಕಿಸ್ತಾನ ವಿರುದ್ಧ ಪ್ರತಿಭಟನೆ ದಾಖಲಿಸಿದ ಭಾರತ

Last Updated 15 ಫೆಬ್ರುವರಿ 2019, 12:05 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೋರಾದಲ್ಲಿ ಶುಕ್ರವಾರ ಪಾಕಿಸ್ತಾನದಜೈಷೆ ಉಗ್ರರು ನಡೆಸಿದ ದಾಳಿಗೆ ಭಾರತ ಪ್ರತಿಭಟನೆ ದಾಖಲಿಸಿದೆ ಹಾಗೂ ಪರಮಾಪ್ತ ದೇಶದ ಪಟ್ಟಿಯಿಂದ ಪಾಕಿಸ್ತಾನವನ್ನು ಕೈಬಿಡಲು ನಿರ್ಧರಿಸುವ ಮೂಲಕ ತಿರುಗೇಟು ನೀಡಿದೆ.

ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಅಪರಾಹ್ನ 3.15ರ ಹೊತ್ತಿಗೆ ಉಗ್ರರು ಅತ್ಯಂತ ಘೋರ ಕೃತ್ಯ ಎಸಗಿದ್ದಾರೆ. ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಜೈಷ್‌–ಎ–ಮೊಹಮ್ಮದ್‌ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. ಬಸ್‌ನಲ್ಲಿ ಇದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಳಿ ಸಂಬಂಧ ಪಾಕಿಸ್ತಾನ ವಿರುದ್ಧ ಪಾಕ್‌ ರಾಯಭಾರಿಗೆ ಭಾರತ ಪ್ರತಿಭಟನೆ ದಾಖಲಿಸಿದೆ. ಉಗ್ರರನ್ನು ಮಟ್ಟಹಾಕಲು ಪಾಕಿಸ್ತಾನ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜತಾಂತ್ರಿಕ ಇಲಾಖೆ ಭಾರತ ಖಡಕ್‌ ಸೂಚನೆ ನೀಡಿದೆ.

ದಾಳಿ ಸಂಬಂಧ ಭಾರತದಲ್ಲಿನ ಪಾಕಿಸ್ತಾನ ರಾಯಭಾರಿ ಸೊಹೈಲ್‌ ಮಹಮದ್‌ ಅವರಿಗೆ ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಜಯಲ್‌ ಗೋಖಲೆ ನೋಟಿಸ್ ನೀಡಿದ್ದಾರೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಸರ್ಕಾರದ ಉನ್ನತ ಮಟ್ಟದ ಸಭೆಯಲ್ಲಿ ಪರಮಾಪ್ತ ದೇಶದ ಪಟ್ಟಿಯಿಂದ ಪಾಕಿಸ್ತಾನವನ್ನು ಕೈಬಿಡಲು ನಿರ್ಧರಿಸಲಾಗಿದೆ.

ಪಾಕಿಸ್ತಾನ ಉಗ್ರರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಲಿ ಎಂದು ಭಾರತ ಸೇರಿದಂತೆ ವಿವಿಧ ದೇಶಗಳು ಪಾಕಿಸ್ತಾನಕ್ಕೆ ಸೂಚನೆ ನೀಡಿವೆ.

* ಇವನ್ನೂ ಒದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT