ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿಶ್ಚಿತ ಪರಿಸ್ಥಿತಿ ಎದುರಿಸಲು ಸ್ಪಷ್ಟ ಕಾರ್ಯಸೂಚಿ ಅಗತ್ಯ: ಸೇನಾ ಮುಖ್ಯಸ್ಥ

Last Updated 10 ಮೇ 2020, 20:30 IST
ಅಕ್ಷರ ಗಾತ್ರ

ನವದೆಹಲಿ: ದೇಶಕ್ಕೆ ಎದುರಾಗಿರುವ ಅನಿಶ್ಚಿತ ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ‘ಸ್ಪಷ್ಟ ಕಾರ್ಯಸೂಚಿ ಹೊಂದಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಸೇನಾ ಮುಖ್ಯಸ್ಥ ಮನೋಜ್ ಮುಕುಂದ್‌ ನರವನೆ ಹೇಳಿದ್ದಾರೆ. ಈ ಮೂಲಕ ರಾಷ್ಟ್ರೀಯ ಭದ್ರತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದೂ ಪ್ರತಿ‍ಪಾದಿಸಿದ್ದಾರೆ.

ಭಾರತದ ನೆರೆಹೊರೆಯಲ್ಲಿನ ಸಂಕೀರ್ಣ ರಾಜಕೀಯ ಶಕ್ತಿಯನ್ನು ಉಲ್ಲೇಖಿಸಿದ ಜನರಲ್‌ ನರವನೆ ಅವರು, ಭಾರತೀಯ ಸೇನಾ ಪಡೆಯು ದೇಶದ ಹಿರಿಮೆಯನ್ನು ಎತ್ತಿಹಿಡಿಯಲು ಬದ್ಧವಾಗಿದೆ ಎಂದು ಹೇಳಿದರು.

ಒಟ್ಟಾರೆ ಈಗ ದೇಶವನ್ನು ಅನಿಶ್ಚಿತವಾದ ಕಾರ್ಯತಂತ್ರಗಳು ಆವರಿಸಿವೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಒಟ್ಟು ಸ್ಥಿತಿಯನ್ನು ವಿಶ್ಲೇಷಿಸಿ ತೀರ್ಮಾನ ಕೈಗೊಳ್ಳಬೇಕಾದ್ದು ಈ ಹೊತ್ತಿನ ಅಗತ್ಯವಾಗಿದೆ ಎಂದರು.

ಪಾಕಿಸ್ತಾನದಿಂದ ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ಗೆ ಬೆಂಬಲ ಹಾಗೂ ಚೀನಾವು ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್‌, ಮಾಲ್ಡೀವ್ಸ್‌ ಜೊತೆಗೆ ಸೇನಾ ಒಪ್ಪಂದ ಹೊಂದಲು ಯತ್ನಿಸುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT