ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ವಿಚಾರ ಕುರಿತು ಮಾತುಕತೆ: ವಿಶ್ವಸಂಸ್ಥೆಯ ಪ್ರಸ್ತಾವ ತಿರಸ್ಕರಿಸಿದ ಭಾರತ

ಭಯೋತ್ಪಾದನೆ ನಿಲ್ಲಿಸಲು ಪಾಕ್‌ಗೆ ಹೇಳಿ ಎಂದು ವಿಶ್ವಸಂಸ್ಥೆಗೆ ಪ್ರತಿಕ್ರಿಯೆ
Last Updated 17 ಫೆಬ್ರುವರಿ 2020, 2:22 IST
ಅಕ್ಷರ ಗಾತ್ರ

ನವದೆಹಲಿ:ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳಿಗೆ ಅನುಗುಣವಾಗಿಕಾಶ್ಮೀರ ಸಮಸ್ಯೆ ಪರಿಹರಿಸುವ ಬಗ್ಗೆವಿಶ್ವಸಂಸ್ಥೆಯಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಮುಂದಿಟ್ಟಿರುವ ಪ್ರಸ್ತಾವವನ್ನು ಭಾರತ ತಿರಸ್ಕರಿಸಿದೆ. ಬದಲಿಗೆ, ಭಯೋತ್ಪಾದನೆಯನ್ನು ರಫ್ತು ಮಾಡುವ ಕೃತ್ಯವನ್ನು ನಿಲ್ಲಿಸಲು ಪಾಕಿಸ್ತಾನಕ್ಕೆ ಸೂಚಿಸಿ ಎಂದು ಪ್ರತಿಕ್ರಿಯಿಸಿದೆ.

ಗುಟೆರಸ್‌ ಅವರು ಭಾನುವಾರ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಜತೆ ಮಾತುಕತೆ ನಡೆಸಿದ್ದರು. ಈ ವೇಳೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳ ಬಗ್ಗೆ ಚರ್ಚೆಯಾಗಿದೆ. ಬಳಿಕ ಕಾಶ್ಮೀರಕ್ಕೆ ಸಂಬಂಧಿಸಿ ಭಾರತ–ಪಾಕಿಸ್ತಾನ ಮಧ್ಯೆ ಇರುವ ಸಮಸ್ಯೆ ಪರಿಹರಿಸುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆಗುಟೆರಸ್‌ ಪ್ರತಿಕ್ರಿಯೆ ನೀಡಿದ್ದು, ಮಾತುಕತೆಯ ಪ್ರಸ್ತಾವ ಮುಂದಿಟ್ಟಿದ್ದಾರೆ.ಜಮ್ಮು–ಕಾಶ್ಮೀರ ಮತ್ತು ಭಾರತ–ಪಾಕಿಸ್ತಾನ ನಡುವಣ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿನ (ಎಲ್‌ಒಸಿ) ಪರಿಸ್ಥಿತಿ ಬಗ್ಗೆ ಕಾಳಜಿ ಹೊಂದಿದ್ದೇವೆ. ಉಭಯ ರಾಷ್ಟ್ರಗಳು ಗರಿಷ್ಠ ಸಂಯಮ ವಹಿಸಬೇಕು ಎಂದೂಗುಟೆರಸ್‌ ಹೇಳಿದ್ದಾರೆ.

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದ ಗುಟೆರಸ್ ಪ್ರಸ್ತಾವಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ ಭಾರತ, ಕಾಶ್ಮೀರಕ್ಕೆ ವಿಚಾರದಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬ ತನ್ನ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ. ಜತೆಗೆ, ಪಾಕಿಸ್ತಾನವುಜಮ್ಮು–ಕಾಶ್ಮೀರದಲ್ಲಿ ಭಾರತದ ಭೂಪ್ರದೇಶವನ್ನು ಅಕ್ರಮವಾಗಿ ಅತಿಕ್ರಮಿಸಿಕೊಳ್ಳುತ್ತಿರುವ ಬಗ್ಗೆ ಗಮನಹರಿಸಬೇಕಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT