ಶನಿವಾರ, ಜೂನ್ 6, 2020
27 °C

Covid-19 India Update| 24 ಗಂಟೆಯಲ್ಲಿ 3,320 ಹೊಸ ಪ್ರಕರಣ, 95 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಶುಕ್ರವಾರ ಬೆಳ್ಳಗೆಯಿಂದ ಶನಿವಾರ ಬೆಳಗ್ಗೆವರೆಗೂ 24 ಗಂಟೆಗಳಲ್ಲಿ ದೇಶದಾದ್ಯಂತ 3,320 ಹೊಸ ಪ್ರಕರಣಗಳು ವರದಿಯಾಗಿದ್ದು, 95 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 59,662ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. 

ಸರ್ಕಾರದ ಮಾಹಿತಿ ಪ್ರಕಾರ, ಇಲ್ಲಿಯವರೆಗೂ ಒಟ್ಟು 1,981 ಜನರು ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 39,834 ಪ್ರಕರಣಗಳು ಸಕ್ರಿಯವಾಗಿವೆ. ಇವರೆಲ್ಲಾ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ವಿವಿಧ ಕ್ವಾರಂಟೈನ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ 17,847 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಚೇತರಿಕೆ ದರವು ಇಂದು ಬೆಳಿಗ್ಗೆ ಶೇ 29.91 ರಷ್ಟಿದ್ದು, ಭಾನುವಾರ ದಾಖಲಾದ ಪ್ರಕರಣಗಳ ಪೈಕಿ ಶೇ 26.59ಕ್ಕಿಂತ ಹೆಚ್ಚಾಗಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 19,063, ಗುಜರಾತ್‌ನಲ್ಲಿ 7,402 ಪ್ರಕರಣಗಳು ಮತ್ತು ದೆಹಲಿಯಲ್ಲಿ 6,318 ಪ್ರಕರಣಗಳು ದಾಖಲಾಗಿವೆ. ಈ ಮಧ್ಯೆ ದೇಶದಲ್ಲಿ ಮೇ 17 ರಂದು ಲಾಕ್‌ಡೌನ್ ಕೊನೆಗೊಳ್ಳಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು