ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್: ಕೇರಳದಲ್ಲಿ ಮತ್ತೊಂದು ಪ್ರಕರಣ ಪತ್ತೆ

Last Updated 2 ಫೆಬ್ರುವರಿ 2020, 5:47 IST
ಅಕ್ಷರ ಗಾತ್ರ

ನವದೆಹಲಿ: ಚೀನಾದ ವುಹಾನ್ ಪ್ರಾಂತ್ಯದಲ್ಲಿ ಹರಡಿರುವ ಅಪಾಯಕಾರಿ ‘ಕೊರೊನಾ ವೈರಸ್’ ಸೋಂಕು ತಗುಲಿರುವ ಎರಡನೇ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.

ಈ ಹಿಂದೆ ಚೀನಾಕ್ಕೆ ತೆರಳಿದ್ದಕೇರಳದ ವ್ಯಕ್ತಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೇರಳದ ವ್ಯಕ್ತಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಅವರನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇಡಲಾಗಿದೆ. ರೋಗಿಯ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಬಗ್ಗೆ ಸೂಕ್ತ ನಿಗಾ ವಹಿಸಲಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದ ಮೊದಲನೇ ಕೊರೊನಾ ವೈರಸ್‌ ಪ್ರಕರಣ ಸಹ ಕೇರಳದಲ್ಲೇ ವರದಿಯಾಗಿತ್ತು. ವುಹಾನ್‌ನಿಂದ ಬಂದ ವಿದ್ಯಾರ್ಥಿನಿಯೊಬ್ಬರಿಗೆ ಸೋಂಕು ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT