ಗುರುವಾರ , ಏಪ್ರಿಲ್ 9, 2020
19 °C

ಕೋವಿಡ್‌–19: ಏಪ್ರಿಲ್ 15ರವರೆಗೆ ಪ್ರವಾಸಿ ವೀಸಾಗಳನ್ನು ಅಮಾನತುಗೊಳಿಸಿದ ಭಾರತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಬರುವ ಎಲ್ಲಾ ಪ್ರವಾಸಿಗರ ವೀಸಾಗಳನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. 

ಕೋವಿಡ್‌–19ನಿಂದ ಹೆಚ್ಚು ಪೀಡಿತವಾಗಿರುವ ಚೀನಾ, ಇಟಲಿ, ದಕ್ಷಿಣ ಕೊರಿಯಾ, ಫ್ರಾನ್ಸ್‌, ಜರ್ಮನಿ, ಸ್ಪೇನ್‌ನಿಂದ ಬರುವ ಭಾರತೀಯರು ಮತ್ತು ವಿದೇಶಿಯರು ಮೇಲೆ ಭಾರತ ನಿರ್ಬಂಧ ಹೇರಿದೆ. ಮಾರ್ಚ್‌ 11ವರೆಗೆ ನೀಡಿದ್ದ ವೀಸಾವನ್ನು ಸರ್ಕಾರ ರದ್ದು ಮಾಡಿದೆ. 

ಭಾರತದಲ್ಲಿ ಈವರೆಗೆ ಕೋವಿಡ್‌–19 ಪೀಡಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿ ಎರಡು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ವೀಸಾ ಅಮಾನತು ಆದೇಶ ಮಾರ್ಚ್ 13ರಂದು 1200 ಜಿಎಂಟಿ ಕಾಲಮಾನದ ಪ್ರಕಾರ ಜಾರಿಗೆ ಬರಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ತಿಳಿಸಿದ್ದಾರೆ. 

ರಾಜತಾಂತ್ರಿಕ, ಅಂತರರಾಷ್ಟ್ರೀಯ ಸಂಸ್ಥೆಗಳು, ಉದ್ಯೋಗ ಮತ್ತು ಯೋಜನಾ ವೀಸಾಗಳಿಗೆ ವಿನಾಯಿತಿ ನೀಡಲಾಗಿದೆ.

ಫೆಬ್ರುವರಿ 15ರ ನಂತರ ಚೀನಾ, ಇಟಲಿ, ಇರಾನ್‌, ದಕ್ಷಿಣ ಕೊರಿಯಾ, ಫ್ರಾನ್ಸ್‌, ಸ್ಪೇನ್‌ ಮತ್ತು ಜರ್ಮನಿಯಿಂದ ಆಗಮಿಸಿದ ಅಥವಾ ಭೇಟಿ ನೀಡಿದ ಭಾರತೀಯ ಪ್ರಜೆಗಳೂ ಸೇರಿದಂತೆ ಎಲ್ಲಾ ಪ್ರಯಾಣಿಕರನ್ನು ಕನಿಷ್ಠ 14 ದಿನಗಳವರೆಗೆ ನಿರ್ಬಂಧಿಸಲಾಗುತ್ತದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಆರೋಗ್ಯ ಸಚಿವ ಹರ್ಷವರ್ಧನ್‌ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು