ಸೋಮವಾರ, ಮೇ 25, 2020
27 °C
ವದಂತಿ ಹರಡಲು ಮತ್ತು ರಾಜಕೀಯಗೊಳಿಸಲು ಬಿಡುವುದಿಲ್ಲ: ಅಮೆರಿಕಕ್ಕೆ ಸೂಚ್ಯವಾಗಿ ಎಚ್ಚರಿಕೆ

ಕೊರೊನಾ: ಪ್ರಕರಣಗಳ ಆಧಾರದಲ್ಲಿ ಮಲೇರಿಯಾ ನಿರೋಧಕ ಔಷಧ ರಫ್ತಿಗೆ ಭಾರತ ಸಮ್ಮತಿ

ಪಿಟಿಐ Updated:

ಅಕ್ಷರ ಗಾತ್ರ : | |

hydroxychloroquine

ನವದೆಹಲಿ: ಕೊರೊನಾ ಸೋಂಕಿನ ಪ್ರರಕಣಗಳ ತೀವ್ರತೆ ಆಧಾರದಲ್ಲಿ ನೆರೆ ರಾಷ್ಟ್ರಗಳೂ ಸೇರಿದಂತೆ ಇತರ ದೇಶಗಳಿಗೆ ಮಲೇರಿಯಾ ನಿರೋಧಕ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.

ಸಾಂಕ್ರಾಮಿಕ ಸೋಂಕಿನಿಂದ ತೀವ್ರವಾಗಿ ತತ್ತರಿಸಿರುವ ರಾಷ್ಟ್ರಗಳಿಗೆ ಮಾನವೀಯ ನೆಲೆಯಲ್ಲಿ ನಾವು ಔಷಧ ಪೂರೈಸುತ್ತೇವೆ. ಈ ವಿಚಾರವಾಗಿ ವದಂತಿ ಹರಡುವುದು ಮತ್ತು ಇದನ್ನು ರಾಜಕೀಯಗೊಳಿಸಲು ನಾವು ಬಿಡುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಸೂಚ್ಯವಾಗಿ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 

‘ಅಂತರರಾಷ್ಟ್ರೀಯ ಸಮುದಾಯವು ಬಲವಾದ ಒಗ್ಗಟ್ಟು ಮತ್ತು ಸಹಕಾರವನ್ನು ಪ್ರದರ್ಶಿಸಬೇಕು ಎಂಬುದನ್ನು ಭಾರತವು ಯಾವಾಗಲೂ ಸಮರ್ಥಿಸಿಕೊಳ್ಳುತ್ತದೆ ಎಂದೂ ಅವರು ಹೇಳಿದ್ದಾರೆ.

ರಫ್ತಿನ ಮೇಲಿನ ನಿರ್ಬಂಧವನ್ನು ತೆರವುಗೊಳಿಸದೇ ಹೋದರೆ ಪ್ರತೀಕಾರ ತೀರಿಸಿಕೊಳ್ಳುವ ಮುನ್ಸೂಚನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡಿದ್ದರು. ಇದರ ಬೆನ್ನಲ್ಲೇ, ಪ್ರರಕಣಗಳ ತೀವ್ರತೆ ನೋಡಿಕೊಂಡು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡಲಾಗುವುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಪ್ಯಾರಸಿಟಮಾಲ್ ರಫ್ತಿಗೂ ಅನುಮತಿ ನೀಡಲಾಗಿದೆ. ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುವ ಆರೋಗ್ಯ ಕಾರ್ಯಕರ್ತರನ್ನು ಸೋಂಕಿನಿಂದ ರಕ್ಷಿಸಲು ಈ ಔಷಧವನ್ನು ಬಳಸಬಹುದು ಎಂಬ ಹಿನ್ನೆಲೆಯಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತನ್ನು ಕಳೆದ ತಿಂಗಳು ನಿಷೇಧಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು